ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆಯುತ್ತಿರುವ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್ ಕೌನ್ಸಿಲ್(DDC) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಒಕ್ಕೂಟ ಸ್ಪಷ್ಟ ಮುನ್ನಡೆ ಸಾಧಿಸಿದೆ. ಅತೀವ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿ ಎರಡನೇ ಸ್ಥಾನಕ್ಕೆ ಕುಸಿದಿದೆ.
ಜಮ್ಮು ಕಾಶ್ಮೀರದ ಒಟ್ಟು 20 ಜಿಲ್ಲೆಗಳ ಡಿಡಿಸಿಗಳಿಗೆ 8 ಹಂತಗಳಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 19ರ ವರೆಗೆ ಚುನಾವಣೆಗಳು ನಡೆದಿದ್ದವು. ಇತ್ತೀಚಿನ ವರದಿಯ ಪ್ರಕಾರ ಫಾರೂಕ್ ಅಬ್ದುಲ್ಲಾರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿಯವರ ಪಿಡಿಪಿ ಸೇರಿದ ಸ್ಥಳೀಯ ಪಕ್ಷಗಳ ಗುಪ್ಕರ್ ಒಕ್ಕೂಟವು 107 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಒಟ್ಟು 280 ಸ್ಥಾನಗಳು
ಗುಪ್ಕರ್ ಒಕ್ಕೂಟ – 107
ಬಿಜೆಪಿ – 62
ಕಾಂಗ್ರೆಸ್ – 22
ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!
280 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆದಿರುವುದರಿಂದ ಮತ ಎಣಿಕೆ ವಿಳಂಬವಾಗಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಶ್ರೀನಗರದಿಂದ ಜಯಗಳಿಸಿರುವ ಪಿಡಿಪಿಯ ರೆಹಾನ್ ಪರ್ವೇಜ್ ಈದ್ಗಾ “ಈ ಗೆಲುವನ್ನು ನಿರೀಕ್ಷಿಸಲಾಗಿತ್ತು. ಜನರು ತಮ್ಮ ಬೆಂಬಲವನ್ನು ತೋರಿಸಿದ್ದಾರೆ. ನಾನು ಈ ಪ್ರದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.
ಜಮ್ಮು ಕಾಶ್ಮೀರ ಕುರಿತ ಬಿಜೆಪಿಯ ತೀರ್ಮಾನ ಮತ್ತು ಹೊಸ ನಾಯಕತ್ವವನ್ನು ಜನ ಒಪ್ಪಿಕೊಳ್ಳುತ್ತಾರೆ ಮತ್ತು ಬಿಜೆಪಿಯನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆಎಂದು ಬಿಜೆಪಿ ಉಸ್ತುವಾರಿ ಅನುರಾಗ್ ಠಾಕೂರ್ ಹೇಳಿದ್ದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ರಾಜಿನಾಮೆ ನೀಡಿದ 3 ನಾಯಕರು!


