Homeಕರ್ನಾಟಕಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ಸಾರ್ವಜನಿಕವಾಗಿ ಹೆಂಡ ಕುಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ಪ್ರಶ್ನೆ ಮಾಡಿದ್ದಕ್ಕೆ, ಠಾಣೆಗೆ ಎಳೆದುಕೊಂಡು ಹೋಗಿ ತೀವ್ರ ದೌರ್ಜನ್ಯ ಎಸಗಿದ ಕುಣಿಗಲ್ ಠಾಣೆಯ ಸಿಬ್ಬಂದಿಯನ್ನು ಈ ಕೂಡಲೇ ಅಮಾನತು ಮಾಡಿ ಎಂದು ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದರು.

- Advertisement -
- Advertisement -

ಪೊಲೀಸರು ಕರ್ತವ್ಯ ಮತ್ತು ಸಮವಸ್ತ್ರದಲ್ಲಿಕೊಂಡೇ ಮದ್ಯ ಸೇವಿಸಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಬುಧವಾರ ವೈರಲ್ ಆಗಿತ್ತು. ಈ ವಿಷಯ ರಾಜ್ಯದಾದ್ಯಂತ ಹರಡುತ್ತಿದ್ದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಠಾಣೆಯ ಎಎಸ್‌ಐ ಶ್ರೀನಿವಾಸ್, ತುರುವೇಕೆರೆ ತಾಲ್ಲೂಕು ದಂಡಿನಶಿವರ ಠಾಣೆಯ ಕಾನ್‌ಸ್ಟೆಬಲ್‌ ಪರಮೇಶ್ ಮತ್ತು ಸಂತೋಷ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಈ ಮೂರೂ ಅಧಿಕಾರಿಗಳು ತಾಲ್ಲೂಕಿನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದರು. ಚುನಾವಣಾ ಕೆಲಸ ಮುಗಿಸಿ ರಾತ್ರಿ ಮನೆಗೆ ಹೊರಟಿದ್ದರು. ಈ ವೇಳೆ 112 ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದಾರೆ. ಆಗ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಘು, ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಲು ರಘು ಅವರನ್ನು ಕುಣಿಗಲ್ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಸ್ಥಳಕ್ಕೆ ಬಂದ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾರೆಡ್ಡಿ, ಠಾಣೆ ಎದುರು ಪ್ರತಿಭಟಿಸಲು ಮುಂದಾದರು. ಆಗ ಪೊಲೀಸರು ಮತ್ತು ಸಮಿತಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು. ಡಿವೈಎಸ್‌ಪಿ ಜಗದೀಶ್ ಪ್ರತಿಭಟನಕಾರರ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ರವಿಕೃಷ್ಣಾ ರೆಡ್ಡಿ, “ಮಾನ್ಯ ಗೃಹಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರೇ, ಕುಣಿಗಲ್ ಪಟ್ಟಣದಲ್ಲಿ ನಿನ್ನೆ ಸಂಜೆ ಖಾಕಿ ಸಮವಸ್ತ್ರದಲ್ಲಿದ್ದಾಗಲೆ ಸಾರ್ವಜನಿಕವಾಗಿ ಹೆಂಡ ಕುಡಿದು ಪಾನಮತ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ಪ್ರಶ್ನೆ ಮಾಡಿದ್ದಕ್ಕೆ, ಠಾಣೆಗೆ ಎಳೆದುಕೊಂಡು ಹೋಗಿ ತೀವ್ರ ದೌರ್ಜನ್ಯ ಎಸಗಿದ ಕುಣಿಗಲ್ ಠಾಣೆಯ ಸಿಬ್ಬಂದಿಯನ್ನು ಈ ಕೂಡಲೇ ಅಮಾನತು ಮಾಡಿ” ಎಂದು ಆಗ್ರಹಿಸಿದ್ದರು.

“ತಾವು ಈ ಮೇಲಿನ ವಿಚಾರವಾಗಿ ಇಂದು ಬೆಳಗ್ಗೆ 10:30ರ ಒಳಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಇಲ್ಲವಾದಲ್ಲಿ ನಾವು ಕುಣಿಗಲ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡುವುದು ಅನಿವಾರ್ಯ ಆಗುತ್ತದೆ” ಎಂದು ಎಚ್ಚರಿಸಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ: ಭಾರತದಲ್ಲಿ ಮುಂದಿನ ವಾರ ಅಸ್ಟ್ರಾಜೆನೆಕಾಗೆ ಅನುಮತಿ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...