2021 ರ ಮಾರ್ಚ್‌ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಧೀರ್ ರಂಜನ್ ಚೌಧರಿ, “ಎಡಪಕ್ಷಗಳ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಸಮ್ಮತಿ ಸೂಚಿಸಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?
Today the Congress High command has formally approved the electoral alliance with the #Left parties in the impending election of West Bengal.@INCIndia@INCWestBengal
— Adhir Chowdhury (@adhirrcinc) December 24, 2020
ಇದನ್ನೂ ಓದಿ: ‘IPL T20’ ಟೂರ್ನಿಗೆ 2 ಹೊಸ ತಂಡ ಸೇರ್ಪಡೆ: ಬಿಸಿಸಿಐ ಒಪ್ಪಿಗೆ
ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯು ಎಡಪಕ್ಷಗಳ ಜೊತೆಗಿನ ಮೈತ್ರಿ ಬಗ್ಗೆ ಒಲವು ತೋರಿ, ಈ ವಿಷಯವನ್ನು ಹೈಕಮಾಂಡ್ ಗಮನಕ್ಕೆ ತಂದಿತ್ತು. ಕಾಂಗ್ರೆಸ್ ಜೊತೆ ಕೈ ಜೋಡಿಸಲು ಎಡಪಕ್ಷಗಳೂ ಆಸಕ್ತಿ ತೋರಿದ್ದವು. ಹಾಗಾಗಿ ಮೈತ್ರಿಯ ಹಾದಿ ಸುಗಮವಾಗಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಎಡಪಕ್ಷ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿಯೇ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಈಗ ಇವು ಮೈತ್ರಿ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2021ರ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆಯಲಿದೆ. ಈ ಬಾರಿ ಹೇಗಾದರೂ ಅಧಿಕಾರ ಹಿಡಿಯಲೇ ಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಮತ್ತೊಂದು ಕಡೆ ಮಮತಾ ಬ್ಯಾನರ್ಜಿಯವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದ್ದಾರೆ.
ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ


