HomeUncategorizedಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ಆಶುಭಾಷಣ ಸ್ಪರ್ಧೆ, ಏಕಾಂಕ ನಾಟಕ, ಬೀದಿ ನಾಟಕಗಳನ್ನು ಕನ್ನಡದಲ್ಲಿ ಮಾಡಲು ಅನುಮತಿ ಇಲ್ಲ. ಕೇವಲ ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ.

- Advertisement -
- Advertisement -

ದಕ್ಷಿಣ ಭಾರತದಲ್ಲಿ ಹಿಂದಿ ಹೇರಿಕೆ ಬಗ್ಗೆ ಮೊದಲಿನಿಂದಲೂ ವಿರೋಧವಿದೆ. ಕರ್ನಾಟಕದಲ್ಲಿ ಸರ್ಕಾರದ ಕಡೆಯಿಂದ ಹಿಂದಿ ಹೇರಿಕೆ ನಡೆ ಕಂಡುಬಂದಾಗ ಪ್ರತಿಭಾರಿಯೂ ಪ್ರತಿಭಟನೆ ನಡೆಯುತ್ತಲೇ ಇರುತ್ತದೆ. ಆದರೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನೆಹರು ಯುವ ಕೇಂದ್ರ, ಬೆಂಗಳೂರು ನಗರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತಾಗಿದೆ.

ಡಿಸೆಂಬರ್‌ 30 ರಂದು ಬೆಂಗಳೂರಿನ ಯವನಿಕ ಸಭಾಂಗಣದಲ್ಲಿ ನಡೆಯಲಿರುವ ಈ ಯುವಜನೋತ್ಸವದಲ್ಲಿ  ಭಾಗವಹಿಸಲು ಅರ್ಜಿ ಆಹ್ವಾನಿಸಿದ್ದು, ಆಶುಭಾಷಣ ಸ್ಪರ್ಧೆ, ಏಕಾಂಕ ನಾಟಕ, ಬೀದಿ ನಾಟಕಗಳನ್ನು ಕನ್ನಡದಲ್ಲಿ ಮಾಡಲು ಅನುಮತಿ ಇಲ್ಲ. ಕೇವಲ ಹಿಂದಿ ಅಥವಾ ಇಂಗ್ಲಿಷ್ ಎರಡು ಭಾಷೆಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಬೆಂಗಳೂರು ನಗರ ಜಿಲ್ಲೆಯ 15 ರಿಂದ 29 ವರ್ಷದೊಳಗಿನ ಯುವಕ ಯುವತಿಯರು, ಕಲಾವಿದರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆದರೆ, ಕನ್ನಡ ನಾಡಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಮಾಯ ಮಾಡಿರುವ ಸರ್ಕಾರದ ಈ ಕ್ರಮಕ್ಕೆ ನಾಡಿನಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಮಂದಿ ಸರ್ಕಾರದ ಕ್ರಮವನ್ನು ಅನ್ಯಾಯದ ಪರಮಾವಧಿ ಎಂದಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಒಂದೇ ಪಕ್ಷ ಆಡಳಿತದಲ್ಲಿರುವ ಕಾರಣ ಕೇಂದ್ರದ ಎಲ್ಲಾ ಆದೇಶಗಳು ಯಥಾವತ್ತಾಗಿ ಕರ್ನಾಟಕದಲ್ಲಿ ಜಾರಿಯಾಗುತ್ತವೆ ಎಂದು ಜಾಲತಾಣಿಗರು ಆರೋಪಿಸಿದ್ದಾರೆ.

ಈಗಾಗಲೇ ಯಡಿಯೂರಪ್ಪ ನೇತೃತ್ವದ ಸರ್ಕಾರ ಹಿಂದಿ ದಿವಸ್ ಆಚರಣೆಯನ್ನು ಸಮರ್ಥನೆ ಮಾಡಿಕೊಂಡಿತ್ತು. ರಾಜ್ಯ ಸರ್ಕಾರದ ಹಲವಾರು ಸಚಿವರು ಹಿಂದಿ ಹೇರಿಕೆ ಬಗ್ಗೆ ತುಟಿ ಬಿಚ್ಚುವುದಿಲ್ಲ. ಆದರೆ ಪಕ್ಕದ ತಮಿಳುನಾಡು, ಕೇರಳದಲ್ಲಿ ಜನರು, ಅಲ್ಲಿನ ರಾಜಕಾರಣಿಗಳು ಕೂಡ ಹಿಂದಿ ಹೇರಿಕೆ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತರು ಟೀಕಿಸುತ್ತಾರೆ.

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಎಂಬ ಅಭಿಯಾನ ಈಗಾಗಲೇ ರಾಜ್ಯದಲ್ಲಿ ಆರಂಭವಾಗಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೂ ಕೂಡ ರಾಜ್ಯ ಸರ್ಕಾರ ಕನ್ನಡ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಿಲ್ಲ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ:  ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....