ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ದಿಕ್ಕು ತಪ್ಪಿಸುವ ಸಲುವಾಗಿ ಖಲೀಸ್ತಾನಿ ಕರಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಹಂಚುತ್ತಿದ್ದ RSS ಕಾರ್ಯಕರ್ತನನ್ನು ರೈತ ಹೋರಾಟಗಾರರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತು ಶಬ್ನಂ ಹಶ್ಮಿ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ರೈತ ಆಂದೋಲನವನ್ನು ದಿಕ್ಕುತಪ್ಪಿಸಲು RSS ಕಾರ್ಯಕರ್ತನೊಬ್ಬ ಖಲೀಸ್ತಾನಿ ಕರಪತ್ರ ಮತ್ತು ಸ್ಟಿಕ್ಕರ್‌ಗಳನ್ನು ವಿತರಿಸುತ್ತಿದ್ದ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ದಯವಿಟ್ಟು ವೀಕ್ಷಿಸಿ ಮತ್ತು ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಸಂಸದರು: ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ
#RSSShameOnYou#FarmersProtest
RSS guy caught distributing Khalistani pamphlets and stickers to defame Kisan andolan. He has been handed over to Police. Must watch and retweet please pic.twitter.com/TLN25zhMsT— Shabnam Hashmi (@ShabnamHashmi) December 25, 2020
ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೇಶದಾದ್ಯಂತ ರೈತರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.
ಈ ಹೋರಾಟವನ್ನು ದಿಕ್ಕುತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಮತ್ತು RSS ಹಾಗೂ ಬಲಪಂಥೀಯ ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.
ಹೋರಾಟ ಮಾಡುತ್ತಿರುವ ರೈತರನ್ನು ಭಯೋತ್ಪಾದಕರು, ಖಲೀಸ್ತಾನಿಗಳು, ನಕ್ಸಲೈಟ್‌ಗಳು ಎಂದು ಬಿಂಬಿಸುವಲ್ಲಿ ಬಿಜೆಪಿ ಐಟಿ ಸೆಲ್‌ನ ಪಾತ್ರ ಬಹಳಷ್ಟಿದೆ ಎಂದೂ ರೈತರು ಆರೋಪಿಸಿದ್ದಾರೆ.
ಇದನ್ನೂ ಓದಿ: ‘ಕನ್ನಡ’ದ ಸಿನೆಮಾ ಅಂದ್ರೆ ಯಾವುದು? : ಕೆ.ಫಣಿರಾಜ್
ಇದರ ನಡುವೆಯೂ, ಈ ಕಾನೂನುಗಳನ್ನು ಹಿಂಪಡೆಯುವಂತೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!
ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.
ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.
ಇದನ್ನೂ ಓದಿ: ಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್



This is the culture of BJP and RSS