ಪ್ರಧಾನಿ ಮೋದಿ ಶುಕ್ರವಾರ ರೈತರನ್ನುದ್ದೇಶಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರತಿಭಟನಾ ನಿರತ ರೈತ ಸಂಘಟನೆ, “ಪ್ರತಿಭಟನೆ ನಡೆಸುತ್ತಿರುವ ರೈತರನ್ನು ವಿಭಜಿಸಲು ಮತ್ತು ದಾರಿ ತಪ್ಪಿಸುವ ಪ್ರಯತ್ನವನ್ನು ಪ್ರಧಾನಿಯವರು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
“ನಮಗೆ ಕನಿಷ್ಟ ಬೆಂಬಲ ಬೆಲೆ (ಎಮ್ಎಸ್‌ಪಿ) ಕುರಿತು ಕಾನೂನು ಭರವಸೆ ದೊರಕುವವರೆಗೆ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ರೈತರು ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ ಹಂಚಿಕೆ: RSS ಕಾರ್ಯಕರ್ತ ಬಂಧನ!
ಇಂದು ಆರು ರಾಜ್ಯಗಳ ರೈತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ವಿರೋಧ ಪಕ್ಷಗಳು ರೈತರಿಗೆ ತಪ್ಪು ಮಾಹಿತಿ ನೀಡಿ ಅವರನ್ನು ದಾರಿ ತಪ್ಪಿಸುತ್ತಿದೆ” ಎಂದು ಪುನರಾವರ್ತಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ರೈತ ಮುಖಂಡ ಅಭಿಮನ್ಯು ಕೋಹರ್, “ಸರ್ಕಾರವು ರೈತರ ವಿಚಾರವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ. ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ, ನಾವು ಇದುವರೆಗೂ ಯಾವುದೇ ರಾಜಕೀಯ ಪಕ್ಷಕ್ಕೂ ಕೂಡಾ ನಮ್ಮ ವೇದಿಕೆಯಲ್ಲಿ ಅವಕಾಶ ನೀಡಿಲ್ಲ. ಸರಕಾರವು ರೈತರನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!


