Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...