Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...