Homeಚಳವಳಿರೈತ ಹೋರಾಟ ಬೆಂಬಲಿಸಲು ದೆಹಲಿಯ ಟಿಕ್ರಿ ಗಡಿ ತಲುಪಿದ ಅಂಧರು!

ರೈತ ಹೋರಾಟ ಬೆಂಬಲಿಸಲು ದೆಹಲಿಯ ಟಿಕ್ರಿ ಗಡಿ ತಲುಪಿದ ಅಂಧರು!

ಪ್ರಧಾನಿ ನರೇಂದ್ರ ಮೋದಿ ಹೊಸ ಕೃಷಿ ಕಾನೂನನ್ನು ಮತ್ತೇ ಸಮರ್ಥನೆ ಮಾಡಿಕೊಂಡಿದ್ದು, ಪ್ರತಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನಿನ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಲು, ಲೂಧಿಯಾನದ ರಾಷ್ಟ್ರೀಯ ಅಂಧರ ಒಕ್ಕೂಟ ಶನಿವಾರ ದೆಹಲಿಯ ಟಿಕ್ರಿ ಗಡಿಗೆ ಬಂದು ತಲುಪಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟ ಇಂದಿಗೆ ಒಂದು ತಿಂಗಳಾಗಿದೆ.

ಕಳೆದ ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ, ಕೇಂದ್ರದ ಜೊತೆ ಆರು ಸುತ್ತಿನ ಮಾತುಕತೆ ಮುರಿದು ಬಿದ್ದಿದೆ. ರೈತರು ಕೇಂದ್ರವು ಪರಿಚಯಿಸಿದ ನೂತನ ಕಾನೂನುಗಳನ್ನು ವಾಪಾಸು ಪಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅದರೆ ಕೇಂದ್ರ ಸರ್ಕಾರ ಇದ್ಯಾವುದನ್ನೂ ಕಿವಿಗೆ ಹಾಕಿಕೊಂಡಿಲ್ಲ. ಶುಕ್ರವಾರ ಕೂಡಾ ಪ್ರಧಾನಿ ನರೇಂದ್ರ ಮೋದಿ ಕಾನೂನನ್ನು ಸಮರ್ಥನೆ ಮಾಡಿಕೊಂಡಿದ್ದು, ಪ್ರತಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ ರೈತರು ತಮ್ಮ ಹೋರಾಟದ ಬಗ್ಗೆ ಸ್ಫಷ್ಟತೆ ಇದೆ, ನಮ್ಮನ್ನು ಯಾರೂ ದಾರಿ ತಪ್ಪಿಸುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರು ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ: ಹೋರಾಟ ನಿರತ ರೈತರ ಆರೋಪ

ರೈತ ಹೋರಾಟಕ್ಕೆ ಅಂಧರ ಒಕ್ಕೂಟದ ಬೆಂಬಲ ನೀಡಿರುವುದನ್ನು ಹಲವಾರು ಜನರು ಬೆಂಬಲಿಸಿದ್ದಾರೆ. ಡಾ. ಸುಯಾಸ್, “ವಿಶೇಷ ಸಾಮರ್ಥ್ಯದ (ಕುರುಡು) ಜನರು ಕೂಡಾ ರೈತರ ನೋವನ್ನು ನೋಡಲು ಸಮರ್ಥರಾಗಿದ್ದಾರೆ. ಆದರೆ ರೈತರು ಮತ ಚಲಾಯಿಸಿದ ಸರ್ಕಾರವು ರೈತರ ಸಮಸ್ಯೆಗಳನ್ನು ಕೇಳದೆ ಕಿವುಡಾಗಿ ವರ್ತಿಸುತ್ತಿದೆ. ರೈತರ ಸಂಕಟವನ್ನು ಕುರುಡರು ನೋಡುತ್ತಾರೆ, ಹಾಗೂ ಅವರ ಪರವಾಗಿ ಮೂಗರೂ ಮಾತನಾಡುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

ಒಂದು ತಿಂಗಳಾದರೂ ತಮ್ಮ ಅಳಲನ್ನು ಕೇಳದ ಸರ್ಕಾರದ ವಿರುದ್ದ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು, ಶನಿವಾರ ದೆಹಲಿ-ಗಾಜಿಯಾಬಾದ್ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 9 ಮತ್ತು 24 ಗಳನ್ನು ತಡೆದಿದ್ದಾರೆ.

ಶುಕ್ರವಾರ ಪೊಲೀಸರು ಶುಕ್ರವಾರ ಸಿಂಘೂ, ಗಾಜಿಪುರ, ಪಿಯಾವ್ ಮಣಿಯಾರಿ ಮತ್ತು ಇತರ ಗಡಿ ಕೇಂದ್ರಗಳನನ್ನು ಬಂದ್‌ ಮಾಡಿದ್ದು, ಪ್ರಯಾಣಿಕರನ್ನು ಲಾಂಪೂರ್, ಸಫಿಯಾಬಾದ್, ಪಲ್ಲಾ, ಮತ್ತು ಸಿಂಘೂ ಸ್ಕೂಲ್ ಟೋಲ್ ಗಡಿಗಳಲ್ಲಿ ಪ್ರಯಾಣಿಸುವಂತೆ ಹೇಳಿದ್ದರು. ಪ್ರತಿಭಟನೆಗಳು ತೀವ್ರಗೊಂಡ ಹಿನ್ನಲೆಯಲ್ಲಿ ಹಿಂಸಾತ್ಮಕ ತಿರುವು ಪಡೆಯದಂತೆ ಗಾಜಿಪುರ ಗಡಿಯಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...