Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು '7–8 ಲಕ್ಷ ರೈತರನ್ನು' ಸೇರಿಸಲಾಗಿದೆ - ಅಣ್ಣಾಮಲೈ

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, “ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಲು 7–8 ಲಕ್ಷ ರೈತರನ್ನು ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯ ವೇದಿಕೆ ವತಿಯಿಂದ ಶನಿವಾರ ಮೈಸೂರಿನಲ್ಲಿ ಆಯೋಜಿಸಿದ್ದ ‘ಬೆಂಕಿಯ ಚೆಂಡು ಕುಯಿಲಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳುನಾಡು ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷ ಅಣ್ಣಾಮಲೈ, “ಕಾಯ್ದೆಗಳ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಿ, ರೈತರನ್ನು ಎತ್ತಿಕಟ್ಟುವ ಪಿತೂರಿ ನಡೆದಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಈ ಕೃಷಿ ಕಾಯ್ದೆಗಳಲ್ಲಿ ಗೊಂದಲ ಉಂಟುಮಾಡುವ ಯಾವುದೇ ಅಂಶಗಳಿಲ್ಲ. ಎಲ್ಲವೂ ಸ್ಪಷ್ಟವಾಗಿದೆ. ಆದರೂ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಗಡಿ ಭಾಗದಲ್ಲಿ 7–8 ಲಕ್ಷ ರೈತರನ್ನು ಸೇರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಂಘರ್ಷ ಉಂಟುಮಾಡುವುದು ಇದರ ಉದ್ದೇಶ” ಎಂದು ಹೇಳಿದರು.

ಅಣ್ಣಾಮಲೈ ಇತ್ತೀಚೆಗೆ ತಮ್ಮ ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ನಂತರ ಇವರಿಗೆ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರ ಹುದ್ದೆಯನ್ನು ನೀಡಲಾಗಿತ್ತು.


ಇದನ್ನೂ ಓದಿ: ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...