Homeಕರ್ನಾಟಕಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ನಾನು ಆರು ವರ್ಷ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷನಾಗಿದ್ದೆ. ಪಕ್ಷ ಕಟ್ಟಲು ನನ್ನ ಕೊಡುಗೆ ಇಲ್ಲ ಎಂದಾದರೆ ಆರು ವರ್ಷ ಅಧ್ಯಕ್ಷನಾಗಿದ್ದದ್ದು ವ್ಯರ್ಥವಾಯಿತೇ?- ಸಿದ್ದರಾಮಯ್ಯ

- Advertisement -
- Advertisement -

ಮೈತ್ರಿ ಸರ್ಕಾರ ಪತನವಾದಾಗಿನಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರಾನೇರ ಗುದ್ದಾಟ ನಡೆಯುತ್ತಿದೆ. ಎರಡೂ ಪಕ್ಷದ ಘಟಾನುಘಟಿಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಎಚ್‌ಡಿ ದೇವೇಗೌಡ ಅವರು ಸುದ್ದಿಗೋಷ್ಟಿ ನಡೆಸಿ, “ಖರ್ಗೆ ಮುಖ್ಯಮಂತ್ರಿ ಆಗುವುದನ್ನು ಕಾಂಗ್ರೆಸ್‌ನವರೇ ಆದ ಒಬ್ಬರು ತಡೆದರು” ಎಂದು ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ಭಾನುವಾರ ತಿರುಗೇಟು ನೀಡಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದನ್ನು ನಾನು ತಡೆದಿಲ್ಲ. ತಡೆದವರ ಹೆಸರನ್ನು ಅವರೇ ಹೇಳಲಿ. ನಾನಂತೂ ತಡೆದಿಲ್ಲ” ಎಂದು ಹೇಳಿದರು.

ಸಿದ್ದರಾಮಯ್ಯ ಜೆಡಿಎಸ್‌ ಪಕ್ಷ ಕಟ್ಟಿಲ್ಲ ಎನ್ನುವ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, “ನಾನು ಆರು ವರ್ಷ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷನಾಗಿದ್ದೆ. ಪಕ್ಷ ಕಟ್ಟಲು ನನ್ನ ಕೊಡುಗೆ ಇಲ್ಲ ಎಂದಾದರೆ ಆರು ವರ್ಷ ಅಧ್ಯಕ್ಷನಾಗಿದ್ದದ್ದು ವ್ಯರ್ಥವಾಯಿತೇ?” ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಸಿದ್ದರಾಮನಹುಂಡಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದಕ್ಕೂ ಮೊದಲು ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಸವಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದರು. ಇದು ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.


ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...