Homeಕರ್ನಾಟಕ’ಗೋಹತ್ಯೆ ನಿಷೇಧ ಮಸೂದೆ’ಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ತೀರ್ಮಾನ

’ಗೋಹತ್ಯೆ ನಿಷೇಧ ಮಸೂದೆ’ಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ತೀರ್ಮಾನ

ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ.

- Advertisement -
- Advertisement -

ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020′(ಗೋಹತ್ಯೆ ನಿಷೇಧ ಮಸೂದೆ)ಯ ಅಂಗೀಕಾರಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸುಗ್ರೀವಾಜ್ಞೆಯ ಅಂಕಿತಕ್ಕೆ ಮಸೂದೆಯನ್ನು ರಾಜ್ಯಪಾಲರಿಗೆ ಮಂಗಳವಾರ ಕಳುಹಿಸಿಕೊಡಲಾವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಪ್ರಸ್ತುತ ಮಸೂದೆ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್ತಿನಲ್ಲಿ ಅದಕ್ಕೆ ತಡೆಯಾಗಿತ್ತು. ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು, “ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ 1964ರ ಕಾಯ್ದೆಯಲ್ಲಿ ಲೋಪಗಳಿದ್ದ ಹಿನ್ನೆಲೆ, ಕೆಲ ತಿದ್ದುಪಡಿ ಮಾಡಲಾಗಿದೆ. 1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ. ದನದ ಮಾಂಸ ತಿನ್ನುವುದಕ್ಕೆ ನಾವು ಯಾವುದೇ ನಿಷೇಧವನ್ನು ಹೇರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“1964 ರ ಕಾಯ್ದೆಯಲ್ಲಿ ಜಾನುವಾರುಗಳ ಹತ್ಯೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಅವಕಾಶವಿರಲಿಲ್ಲ. ಇದೀಗ ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ. ಹಳೆಯ ಕಾನೂನು ಬಿಗಿಯಾಗಿರಲಿಲ್ಲ. ಈಗಿನ ಕಾಯ್ದೆಯಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಿದರೆ ಅದನ್ನು ವಶಕ್ಕೆ ಪಡೆಯಲಾಗುವುದು. ಅಲ್ಲದೆ, ವಾಹನವನ್ನು ಬ್ಯಾಂಕ್ ಗ್ಯಾರಂಟಿ ಮೂಲಕ ಹಿಂಪಡೆಯಬಹುದು” ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...