Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...