Homeಕರ್ನಾಟಕಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ.

- Advertisement -
- Advertisement -

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಈ ಕ್ಷಣಕ್ಕೂ ನಂಬಲು ಸಿದ್ದರಿಲ್ಲ. ಆದರೆ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಈ ಘಟನೆಯೇ ಆತ್ಮಹತ್ಯೆಗೆ ಕಾರಣ ಎಂಬ ಚರ್ಚೆಗಳು ಕೇಳಿ ಬರುತ್ತಿವೆ.

ಧರ್ಮೇಗೌಡರು ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜಕೀಯ ಜೀವನ ಮುನ್ನಡೆಸಿಕೊಂಡು ಬಂದವರು. ಅವರು ಜೆಡಿಎಸ್‌ಗೆ ನಿಷ್ಠರಾಗಿದ್ದರೂ ಎದುರಾಳಿ ಪಕ್ಷದವರೊಂದಿಗೆ ಎಲ್ಲಿಯೂ ಸಂಘರ್ಷಾತ್ಮಕ ರಾಜಕಾರಣಕ್ಕೆ ಇಳಿದವರಲ್ಲ. ದ್ವೇ಼ಷ ಬೆಳೆಸಿಕೊಂಡಂತಹ ಯಾವ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರಲ್ಲ, ಎಂತಹುದ್ದೆ ಸಂದರ್ಭದಲ್ಲೂ ಧೈರ್ಯ, ಆತ್ಮವಿಶ್ವಾಸ ಕಳೆದುಕೊಂಡದ್ದನ್ನು ಅವರ ಹಿಂಬಾಲಕರು, ಸ್ನೇಹಿತರು, ಅವರನ್ನು ಹತ್ತಿರದಿಂದ ಬಲ್ಲ ಯಾರೊಬ್ಬರು ಕಂಡಿದ್ದಿಲ್ಲ. ಗಂಡೆದೆಯ ವ್ಯಕ್ತಿತ್ವ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಕೌಟುಂಬಿಕವಾಗಿ ಅಂತಹ ಯಾವ ಸಮಸ್ಯೆಗಳೂ ಇರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಸಹೋದರ ಎಂಎಲ್‌ಸಿಯೂ ಆಗಿರುವ ಭೋಜೇಗೌಡರೊಂದಿಗೂ ಆಪ್ತತೆ ದಟ್ಟವಾಗಿತ್ತು. ಇನ್ನೂ ರಾಜಕೀಯವಾಗಿ ಉಪಸಭಾಪತಿಯಂತ‌ ಘನ ಹುದ್ದೆಯೇ ಅನಿರೀಕ್ಷಿತವಾಗಿ ದಕ್ಕಿತ್ತು. ಅದರಾಚೆ ಉನ್ನತ ಹುದ್ದೆಯ ಯಾವ ಆಕಾಂಕ್ಷೆಗಳನ್ನು ಅವರು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಿರಲಿಲ್ಲ. ಹೀಗಿದ್ದಾಗ್ಯೂ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವಂತ ಪ್ರಬಲ ಕಾರಣವಾದರೂ ಏನಿತ್ತು ಎಂಬ ಮಿಲಿಯನ್ ಪ್ರಶ್ನೆಗಳು ಸದ್ಯಕ್ಕೆ ಎಲ್ಲರನ್ನು ಕಾಡುತ್ತಿವೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಆಪ್ತ ಧರ್ಮೇಗೌಡರ ಆತ್ಮಹತ್ಯೆಗೆ “ರಾಜಕೀಯ ವ್ಯವಸ್ಥೆ, ವಿಧಾನ ಪರಿಷತ್ತಿನಲ್ಲಿ ನಡೆದ ವಿದ್ಯಮಾನಗಳೇ ಕಾರಣ, ಅವರದ್ದು ರಾಜಕೀಯ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಸ್ಥಿತಿಗೆ ಕಾರಣರ್ಯಾರು ಎಂಬುದು ತನಿಖೆ ಆಗಬೇಕು. ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಆರೋಪಕ್ಕೆ ಬಿಜೆಪಿ, ಕಾಂಗ್ರೇಸ್ ನಾಯಕರು ಪ್ರತಿಕ್ರಿಯೆ ಕೊಡದೆ ಪ್ರಕರಣವನ್ನು ರಾಜಕೀಕರಣಗೊಳಿಸದೆ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಹಾಗೊಮ್ಮೆ ಕುಮಾರಸ್ವಾಮಿ ಅವರ ಹೇಳಿಕೆಯಂತೆ ಇತ್ತೀಚೆಗೆ ವಿಧಾನಪರಿಷತ್ತಿನಲ್ಲಿ ನಡೆದ ರಾಜಕೀಯ ಗಲಾಟೆಯೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ ಎಂಬುದು ನಿಜವಾದರೆ, ಅದಕ್ಕೆ ಎಲ್ಲಾ ರಾಜಕೀಯ ಪಕ್ಷಗಳೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಸಂವಿಧಾನ ರಿವಾಜ್ಹುಗಳನ್ನು ಕಾಲಕಸವಾಗಿಸಿಕೊಂಡು ತುಳಿದಾಡಿದವರ ದರ್ಪಕ್ಕೆ ಧರ್ಮೇಗೌಡರಂತ ಗಟ್ಟಿ ಮನುಷ್ಯನೂ ಕುಸಿದು ಆತ್ಮಹತ್ಯೆಗೆ ತಲೆಯೊಡ್ಡಿಬಿಟ್ಟರಾ? ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆಯೇ ಆಗುತ್ತದೆ. ಇದಕ್ಕೆ ಮೂರೂ ಪಕ್ಷಗಳು ಕೊಲೆಪಾತಕರಾಗಿ ಕಟಕಟೆಗೆ ನಿಲ್ಲಬೇಕಾಗುತ್ತದೆ.

ರಾಜಕೀಯ ಮೌಲ್ಯಗಳು, ಸಂವಿಧಾನಿಕ ನಿಯಮಗಳ ಪಾಲನೆ ಮಣ್ಣುಪಾಲಾಗಿ ಯಾವುದೋ ಕಾಲವಾಗಿವೆ. ಈಗ ಉಳಿದಿರುವುದು ಕೇವಲ “ದಂಧೆಕೋರ ರಾಜಕಾರಣ” ಮಾತ್ರ. ಇದಕ್ಕೆ ಯಾರು ಬಲಿಯಾದರೂ ಆಶ್ಚರ್ಯಪಡುವಂತಿಲ್ಲ. ಧರ್ಮೇಗೌಡರು ಅನೇಕ ಅನುಮಾನ, ಸಂದೇಶಗಳನ್ನು ಬಿಟ್ಟು ಹೋಗಿದ್ದಾರೆ. ಅದು ನಿಷ್ಪಕ್ಷಪಾತ ತನಿಖೆಯಿಂದ ಬಯಲಾಗಬೇಕು.


ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. YELLA MUGIDA MELEW MATADUVADE DHARMA SAMRAJYA!
    MAULYAGALU KUSIYUTTIVE PAKSHA MUKHANDARINDA.. YIDARALLI GEDDAVARESTO SOTU SUNNAVADAVARESTO LEKKAKKILLA!

  2. tomorrow news today! vidhana parishattina man haraju madidantayitalla annuva sandarbhadalli dharmegoudar marana parishatti gene maran mridanga hadidantagide?!!! adara mana marya de ulisalosugavadaru. siddhavagiruva varadi oppikollabeku???!!!>!< pranesha obba aparadhi sthanadalliddanendu bahiranga sabeetagihogide aste satya! yinnulida reetineeti anusarisuvadadare " SABHAPATI STHANADA MARYADEYANNADARU KAPADA BEKASTE ALLAVE? yidukaran parisha sabhapati sthanakke gourava needuvadadalli .. yeegiruva sabhapatiyannu khurchiyinda yilisuvalli yavude artha kanadu?" bre arthakkene bele koduvadadalli avara rajiname sweekratavadante annusutte! adarina sadanada ghanate mattastu mannu palu madidanteye allave??!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...