Homeಕರ್ನಾಟಕರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

ಪಾಲಿಕೆಯಂತೆಯೇ ಹಿಂದೂಗಳು ಬಹುಸಂಖ್ಯಾತರಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳೂ ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿಯನ್ನು ಊಹಿಸಲೂ ಅಸಾಧ್ಯ- ಅನಂತಕುಮಾರ್ ಹೆಗ್ಡೆ

- Advertisement -
- Advertisement -

ಬೆಂಗಳೂರಿನ ಪಾದರಾಯನಪುರದ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ್‌ ಹೆಗ್ಡೆ ವಿರೋಧ ವ್ಯಕ್ತಪಡಿಸಿದ್ದಾರೆ. “ರಸ್ತೆಗಳಿಗೆ ಮುಸ್ಲಿಂ ಸಮಾಜ ಸೇವಕರ ಹೆಸರಿಟ್ಟರೆ ಕೋಮು ಸಾಮರಸ್ಯ ಹದಗೆಡುತ್ತದೆ” ಎಂದು ಪತ್ರ ಬರೆದಿದ್ದಾರೆ.

“ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರಿಡಬೇಕೆನ್ನುವ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಈಗ ಸಮಾಜ ಸೇವಕರ ಹೆಸರಿನಲ್ಲಿ ಮುಸ್ಲಿಮರ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಈ ಮೂಲಕ ಒಂದು ಕೋಮಿನ ತುಷ್ಠೀಕರಣಕ್ಕೆ ಮುಂದಾಗುವುದು ಸರಿಯಲ್ಲ. ಇದು ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಬಿರುಕು?

ಬಿಬಿಎಂಪಿ ನೀಡಿರುವ ಆದೇಶ:

“ಪಾಲಿಕೆಯಂತೆಯೇ ಹಿಂದೂಗಳು ಬಹುಸಂಖ್ಯಾತರಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳೂ ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿಯನ್ನು ಊಹಿಸಲೂ ಅಸಾಧ್ಯ. ಹಾಗೇನಾದರೂ ಹೆಸರಿಡುವ ಅನಿವಾರ್ಯತೆಯಿದ್ದರೆ, ಸ್ವಾತಂತ್ರ್ಯ ಹೋರಾಟಗಾರರು, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರು, ರಾಷ್ಟ್ರದ ಮಹಾನ್ ವ್ಯಕ್ತಿಗಳ ಹೆಸರನ್ನು ಇಡಬಹುದು. ಆದರೆ ಮುಸಲ್ಮಾನರ ಹೆಸರುಗಳನ್ನು ಇಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

“ಬಿಬಿಎಂಪಿಯ ಈ ಬೇಜವಾಬ್ದಾರಿತನದ ಪರಮಾವಧಿಯ ನಿರ್ಧಾರವನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಅಗ್ರಹಿಸುತ್ತೇನೆ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಸಂಸದ ಅನಂತ ಕುಮಾರ್ ಹೆಗ್ಡೆ ಬರೆದಿರುವ ಪತ್ರ:

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೆಲ್ಫೇರ್‌ ಪಾರ್ಟಿಯ ಮುಖಂಡರಾದ ತಾಹೀರ್ ಹುಸೇನ್, “ಸಮಾಜ ಸೇವಕರು ಅಂದರೆ ಅವರು ಸಮಾಜ ಸೇವಕರು ಮಾತ್ರ. ಅವರಲ್ಲಿ ಜಾತಿ ಧರ್ಮ ಹುಡುಕುವುದು ಸರಿಯಲ್ಲ. ಅದಾಗ್ಯೂ ಬೇರೆ-ಬೇರೆ ಸಮುದಾಯದವರು ಇದ್ದರೂ ಒಳ್ಳೆಯದೇ. ಆದರೆ ಇದನ್ನೇ ನೆಪ ಮಾಡಿಕೊಂಡು ವಿರೋಧ ಮಾಡುವುದು ಸರಿಯಲ್ಲ. ಎಲ್ಲದಕ್ಕೂ ಕೋಮು ಬಣ್ಣ ಹಚ್ಚುವುದು ಸರಿಯಲ್ಲ” ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ರೈತಸಂಘದ ಉಪಾಧ್ಯಕ್ಷರಾದ ವೀರಸಂಗಯ್ಯ, “ಬಿಬಿಎಂಪಿಯ ಈ ನಿರ್ಧಾರದಿಂದ ಸಾಮರಸ್ಯ ಹೆಚ್ಚಾಗುತ್ತದೆಯೇ ಹೊರತು ಹಾಳಾಗುವುದಿಲ್ಲ. ಯಾವುದೇ ಆದರ್ಶ ವ್ಯಕ್ತಿಗಳನ್ನ ಸಾಧಕರನ್ನ ಅವರ ಜಾತಿ-ಧರ್ಮದ ಹಿನ್ನೆಲೆಯಲ್ಲಿ ನೋಡಬಾರದು. ಅವರನ್ನು ಮಹಾಮಾನವರನ್ನಾಗಿಯೇ ಸ್ವೀಕರಿಸಬೇಕು. ಹಾಗಾಗಿ ಅನಂತಕುಮಾರ್ ಹೆಗ್ಡೆ ಕೂಡ ಈ ಸೌಹಾರ್ದಯುತ ಭಾವನೆಗೆ ಒಳಪಡಬೇಕು ಎನ್ನುವುದು ನಮ್ಮ ಒತ್ತಾಯ” ಎಂದು ಹೇಳಿದರು.


ಇದನ್ನೂ ಓದಿ: ಶಾಹೀನ್ ಬಾಗ್ ಶೂಟರ್‌ನ ಪಕ್ಷಕ್ಕೆ ಸೇರಿಸಿ ಕೆಲವೇ ಗಂಟೆಗಳಲ್ಲಿ ಉಚ್ಛಾಟಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...