Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...