Homeಎಕಾನಮಿಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

- Advertisement -
- Advertisement -

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಸಾಲದ ಅಧಿಕೃತ ಅಂಕಿಅಂಶಗಳ ಪ್ರಕಾರ, 2020-21ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ, ಭಾರತದ ಒಟ್ಟು ಸಾಲ ಶೇಕಡಾ 5.6 ರಷ್ಟು ಹೆಚ್ಚಳಗೊಂಡು 107.04 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.

ಕೊರೊನಾ ಸಾಂಕ್ರಾಮಿಕವು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ ಎಂದು ಸರ್ಕಾರ ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಆರ್ಥಿಕತೆಯಲ್ಲಿ ಜಿಡಿಪಿ ಶೇಕಡಾ -23.9 ರಷ್ಟು ಕುಸಿತ ಕಂಡುಬಂದಿತ್ತು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಈ ಐತಿಹಾಸಿಕ ಕುಸಿತಕ್ಕೆ ಕೊರೊನಾ ವೈರಸ್ ಕಾರಣವೆಂದು ಹೇಳಿ ಸರ್ಕಾರ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ಈ ಹಿಂದೆಯೇ ಕೇಂದ್ರ ಜಾರಿಗೊಳಿಸಿದ್ದ ನೋಟು ಅಮಾನ್ಯೀಕರಣ, ಜಿಎಸ್‌ಟಿ ಸೇರಿದಂತೆ ಅನೇಕ ಅವೈಜ್ಞಾನಿಕ ನೀತಿಗಳೇ ಇದಕ್ಕೆ ಕಾರಣ ಎಂದು ಹೇಳಿವೆ.

ಈಗ ಕೇಂದ್ರ ಸರ್ಕಾರವೆ ಅಧಿಕೃತವಾಗಿ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ದೇಶವು ತನ್ನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ ಎನ್ನುವುದು ಬಹಿರಂಗವಾಗಿದೆ.

ಇದನ್ನೂ ಓದಿ: ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

ಇತ್ತೀಚೆಗೆ ಆರ್‌ಬಿಐನ ಉಪ ಗವರ್ನರ್ ಮೈಕೆಲ್ ಪಾತ್ರಾ ಮಾತನಾಡಿ, ಆರ್ಥಿಕತೆ ಪುನರುಜ್ಜೀವನಗೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಿದ್ದರು.

ಅರ್ಥಿಕ ಕುಸಿತದಿಂದ ಕೇಂದ್ರ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು.


ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...