ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಏಳು ನಾಗರಿಕರು ಗಾಯಗೊಂಡಿದ್ದಾರೆ.
“ಪುಲ್ವಾಮಾದ ತ್ರಾಲ್‌ನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಏಳು ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ನಾಗರಿಕರ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ”ಎಂದು ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Jammu and Kashmir: Seven civilians suffered minor injuries in grenade attack in Tral, Pulwama. Health condition of all the injured is stable. pic.twitter.com/pySiAxJe9C
— ANI (@ANI) January 2, 2021
ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ
ಭದ್ರತಾ ಪಡೆಗಳನ್ನು ಗುರಿಯಾಗಿಸಿ ಕೊಂಡು ಉಗ್ರರು ಶನಿವಾರ 11.30 ರ ಸುಮಾರಿಗೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ ಗುರಿ ತಪ್ಪಿದ ಗ್ರೆನೇಡ್ ಮಾರುಕಟ್ಟೆಯಲ್ಲಿ ಸ್ಫೋಟಗೊಂಡು ಏಳು ನಾಗರಿಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆ ನಡೆದ ಪ್ರದೇಶವನ್ನು ಸುತ್ತುವರಿಯಲಾಗಿದೆ. ಉಗ್ರರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?


