ಕಾಂಗ್ರೆಸ್ ಸಂಸದ ರವ್ನೀತ್ ಸಿಂಗ್ ರೈತ ಹೋರಾಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕೆಲವು ದಿನಗಳ ಹಿಂದೆ ರವ್ನೀತ್ ಸಿಂಗ್ ಮಾಡಿದ ಭಾಷಣವು ಪೂರ್ವಗ್ರಹಪೀಡಿತವಾಗಿದ್ದು, ಇದು ರಾಷ್ಟ್ರೀಯ ಏಕತೆಗೆ ಧಕ್ಕೆಯುಂಟುಮಾಡುತ್ತದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
ಶಾಂತಿ ಕದಡುವ ಉದ್ದೇಶದಿಂದ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 504 ಮತ್ತು 506 ರ ಅಡಿಯಲ್ಲಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್.ಡಿ.ಕೆ
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಯ ಕುರಿತ ಟಿವಿ ಚರ್ಚೆಯಲ್ಲಿ, ಡಿಸೆಂಬರ್ 25 ರಂದು ಸಂಸದರು ನೀಡಿದ ಹೇಳಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
“ಸಂಸದರ ಹೇಳಿಕೆಯು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡುವ ಸಾಧ್ಯತೆಯಿದೆ. ಇದು ಯಾವುದೇ ವ್ಯಕ್ತಿಯನ್ನು ರಾಜ್ಯ ಅಥವಾ ಸಾರ್ವಜನಿಕ ಶಾಂತಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸಬಹುದು” ಎಂದು ನವೀನ್‌ಕುಮಾರ್ ಎಂಬುವವರು ದೂರಿನಲ್ಲಿ ಆರೋಪಿಸಿದ್ದಾರೆ.
ಚರ್ಚೆಯಲ್ಲಿ, “ರೈತರ ಈ ನಿರಂತರ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ನಾವು ದೇಹಗಳನ್ನು ರಾಶಿ ಮಾಡಬೇಕಾಗಬಹುದು. ನಾವು ರಕ್ತ ಚೆಲ್ಲುತ್ತೇವೆ. ನಮ್ಮ ಗುರಿಯನ್ನು ಸಾಧಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು” ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಡಿಸಂಬರ್ 31 ರಂದು ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ
ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಜನವರಿ 1 ರಂದು ಫೇಸ್‌ಬುಕ್ ಲೈವ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ಅನ್ನು, ತಮಗೆ ಸಿಕ್ಕಿದ ‘ಪದಕ’ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ.
“ನಾನು ಇಡೀ ದಿನ ಇಲ್ಲಿಯೇ ಕುಳಿತಿರುತ್ತೇನೆ. ದಯವಿಟ್ಟು ನನ್ನನ್ನು ಬಂಧಿಸಿ. ಆದರೆ ನನ್ನನ್ನು ಬಂಧಿಸುವ ಧೈರ್ಯ ನಿಮ್ಮಲ್ಲಿಲ್ಲ. ನಾನೇ ಬಂದು ಶರಣಾಗುತ್ತೇನೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!


