“ಪುಣೆ ಮಹಾನಗರ ಪಾಲಿಕೆಯ ಚುನಾವಣೆಯನ್ನು ಗೆದ್ದರೆ, ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಲಾಗುವುದು” ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
“ಇದಕ್ಕೆ ಎಲ್ಲರ ಒಪ್ಪಿಗೆಯೂ ಇದ್ದು, ಇಲ್ಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿದರೆ ಈ ಕುರಿತ ನಿರ್ಣಯವನ್ನು ಅಂಗೀಕರಿಸಲಾಗುವುದು” ಎಂದು ಆಶ್ವಾಸನೆ ನೀಡಿದ್ದಾರೆ.
ಇಪ್ಪತ್ತು ವರ್ಷಗಳ ಹಿಂದೆಯೇ ಔರಂಗಾಬಾದ್ ಅನ್ನು ಸಂಭಾಜಿನಗರವೆಂದು ಮರುನಾಮಕರಣ ಮಾಡುವ ಬೇಡಿಕೆಯನ್ನು ಶಿವಸೇನಾ ಇರಿಸಿತ್ತು. ಇದಕ್ಕೆ ಸಂಬಂಧಿಸಿದಂತೆ 1995 ರಲ್ಲಿ ಔರಂಗಾಬಾದ್ ನಗರಪಾಲಿಕೆಯು ನಿರ್ಣಯವನ್ನು ಕೈಗೊಂಡಿತ್ತು. ಆದರೆ ಈ ನಿರ್ಣಯವನ್ನು ಕಾಂಗ್ರೆಸ್ ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಶ್ನಿಸಿತ್ತು. ಹೆಸರು ಬದಲಾವಣೆಯನ್ನು ಕಾಂಗ್ರೆಸ್ ಸತತವಾಗಿ ವಿರೋಧಿಸುತ್ತಲೇ ಬಂದಿದೆ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದೆ.
ಇದನ್ನೂ ಓದಿ: ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ
ಬಿಜೆಪಿ ಸರ್ಕಾರವು ಕೇವಲ ಹೆಸರು ಬದಲಾವಣೆ ಮಾಡುವುದನ್ನು ಬಿಟ್ಟರೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಯಾವಾಗಲೂ ಆರೋಪಿಸುತ್ತಲೇ ಇದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಹಲವು ನಗರ-ಪಟ್ಟಣ-ರಸ್ತೆಗಳ ಹೆಸರನ್ನು ಮರುನಾಮಕರಣ ಮಾಡಿದೆ.
ಇದನ್ನೂ ಓದಿ: ಕೊರೊನಾ ಹಿನ್ನೆಲೆ: ಜನವರಿ 31 ರವರೆಗೆ ಲಾಕ್‌ಡೌನ್ ವಿಸ್ತರಿಸಿದ ಜರ್ಮನ್!


