Homeಚಳವಳಿರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ - ಹೋರಾಟದ ಮುಂದೇನು ದಾರಿ?

ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 41 ನೇ ದಿನಕ್ಕೆ ಕಾಲಿಟ್ಟಿದೆ. ರೈತರೊಂದಿಗೆ ನಡೆಸಿದ ಏಳನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ಒಕ್ಕೂಟ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ತಿರುಗಿದೆ.

ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಹಾಗೂ ಅದಕ್ಕೆ ಸಂಬಂಧಿಸಿ ಒಟ್ಟು ಎಂಟು ಅರ್ಜಿಗಳು ಸಲ್ಲಿಕೆಯಾಗಿದೆ. ಮಂಗಳವಾರ(ಇಂದು) ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಸು‌ಪ್ರೀಂ ಕೋರ್ಟ್‌ ಅರ್ಜಿಗಳಲ್ಲಿ ರೈತ ಸಂಘಟನೆಗಳನ್ನು ಕೂಡಾ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಆದರೆ ರೈತ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ’ನಮಗೆ ಕಾನೂನು ಪರಿಹಾರ ಬೇಕಿಲ್ಲ, ಸರ್ಕಾರದಿಂದ ಪರಿಹಾರ ಬೇಕಿದೆ’ ಎಂದು ಹೇಳಿದ್ದವು.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ ಎಂದ ರೈತರು

ರೈತರು ಪ್ರತಿಭಟನೆ ನಡೆಸಿದ ದಿನದಿಂದಲೂ ಅವರೊಂದಿಗೆ ಕಠಿಣವಾಗಿ ವರ್ತಿಸಿದ್ದ ಒಕ್ಕೂಟ ಸರ್ಕಾರ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ತುಸು ಮಂಡಿಯೂರತೊಡಗಿದೆ. ಮೊದಲಿಗೆ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ, ಲಾಠಿ ಚಾರ್ಜ್ ಮಾಡಿ ತನ್ನ ದರ್ಪ ಮೆರೆದಿತ್ತು. ಆದರೆ ನಂತರದಲ್ಲಿ ಈ ವಿಧಾನವನ್ನು ಕೈಚೆಲ್ಲಿ ಬೇರೆಯೆ ರೀತಿಯಲ್ಲಿ ತನ್ನ ತಂತ್ರವನ್ನು ಪ್ರಾರಂಭಿಸಿತ್ತು. ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿಗಳು ಎಂದಿದ್ದ ಒಕ್ಕೂಟ ಸರ್ಕಾರ, ನಂತರದಲ್ಲಿ ಖಾಲಿಸ್ತಾನಿಗಳು ಎಂದು ಕೆರೆದಿದ್ದಕ್ಕೆ ವಿಷಾಧ ವ್ಯಕ್ತಪಡಿಸಿತ್ತು.

ಯಾವುದೇ ಪ್ರತಿಭಟನೆಗೂ ಜಗ್ಗುವುದಿಲ್ಲ ಎಂಬಂತಿದ್ದ ಸರ್ಕಾರ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದೆ. ಜೊತೆಗೆ ಆರನೇ ಸುತ್ತಿನ ಮಾತುಕತೆಯ ಸಮಯದಲ್ಲಿ ಸಚಿವರು ರೈತರೊಂದಿಗೆ ಜೊತೆಗೂಡಿ ಊಟ ಮಾಡಿದ್ದರು. ಏಳನೇ ಸುತ್ತಿನಲ್ಲಿ ಮಾತುಕತೆಯ ಸಮಯದಲ್ಲಿ ಸಭೆಯ ಪ್ರಾರಂಭಕ್ಕೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಕೋರಲಾಗಿತ್ತು.

ಅದಾಗ್ಯೂ ಏಳನೇ ಸುತ್ತಿನ ಮಾತುಕತೆಗೂ ಮುನ್ನ ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಆಶ್ರುವಾಯು ದಾಳಿ ನಡೆಸಿದೆ. ಆರನೇ ಸುತ್ತಿನಲ್ಲಿ ರೈತರೊಂದಿಗೆ ಊಟ ಮಾಡಿದ್ದ ಸಚಿವರು ಏಳನೇ ಸುತ್ತಿನ ಮಾತುಕತೆಯ ಸಮಯದಲ್ಲಿ ರೈತರೊಂದಿಗೆ ಊಟಕ್ಕೆ ಸೇರಲಿಲ್ಲ. ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ - ಜನವರಿ 8 ಕ್ಕೆ ಮತ್ತೊಂದು ಸಭೆ
PC : Zee News

ಪ್ರತಿಭಟನೆಗಳನ್ನು ಬಲಪ್ರಯೋಗಿಸಿಯೇ ಬಗ್ಗಿಸಿ ಅಭ್ಯಾಸವಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಇನ್ನೇನೋ ತಂತ್ರ ಹೂಡುತ್ತಿದೆ ಎಂಬ ಸಂಶಯ ವ್ಯಾಪಕವಾಗಿದೆ. ಆದರೆ ಬೇರೆ ಹೋರಾಟಗಳನ್ನು ದಮನಿಸಿದಂತೆ ಈ ಆಂದೋಲನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿಭಟನೆಯ ಭಾಗವಾಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗಟ್ಟಾಗಿದೆ. ಇವರನ್ನು ಒಡೆಯಲು ಆರಂಭದಲ್ಲಿ ಸರ್ಕಾರ ಪ್ರಯತ್ನಿಸಿತ್ತಾದರೂ ಅದು ಯಶಸ್ವಿಯಾಗಿಲ್ಲ. ಪ್ರತಿಭಟನೆಯ ದಿನಗಳು ಹೆಚ್ಚುತ್ತಿದ್ದಂತೆ ರೈತ ಸಂಘಟನೆಗಳ ಒಗ್ಗಟ್ಟು ಗಟ್ಟಿಯಾಗುತ್ತಲೆ ಇದೆ.

ಈ ನಡುವೆ ಏಳನೇ ಮಾತುಕತೆ ವಿಫಲವಾದರೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಪಂಜಾಬ್‌ನ ರೈತರು ತಮ್ಮ ರಾಜ್ಯದ ಯುವಜನರಲ್ಲಿ ಮನವಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದಿಂದಲೂ ಹಲವಾರು ಸಂಘಟನೆಗಳು ದೆಹಲಿಯತ್ತ ಮುಖ ಮಾಡಿವೆ. ಒಟ್ಟಿನಲ್ಲಿ, ಕೊರೆಯುತ್ತಿರುವ ದೆಹಲಿಯ ಚಳಿ, ಮಳೆಗೆ ಜಗ್ಗದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಒಕ್ಕೂಟ ಸರ್ಕಾರ ಎಂಟನೇ ಸುತ್ತಿನ ಮಾತುಕತೆ ಜನವರಿ 8 ಕ್ಕೆ ನಿಗದಿಯಾಗಿದೆ. ರೈತರು ತಮ್ಮ ನಿಲುವಲ್ಲಿ ಗಟ್ಟಿಯಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ವಾಪಾಸು ಪಡೆಯುವುದಿಲ್ಲ ಎಂದು ಅಚಲ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡಿ, ಗಡಿ ಕಾಯಲು ನಮ್ಮ ಮಕ್ಕಳನ್ನು ನೀಡಿ, ಈಗ ನಮ್ಮ ಜೀವವನ್ನೂ ನೀಡುತ್ತಿದ್ದೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...