Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...