Homeಕರ್ನಾಟಕಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

- Advertisement -
- Advertisement -

ಬಾಗಲಕೋಟೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರನ್ನು ಪೊಲೀಸರ ಸಮ್ಮುಖದಲ್ಲೇ ಎಳೆದಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ 2020 ರ ನವೆಂಬರ್ 09 ರಂದು ಈ ಘಟನೆ ನಡೆದಿತ್ತು. ಅಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಮತ ಹಾಕಲು ಬಂದ ಪುರಸಭೆ ಸದಸ್ಯೆ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್​ ಅವರನ್ನು ಎಳೆದಾಡಲಾಗಿತ್ತು. ಪುರಸಭೆಯ ಒಳಗೆ ಬಾರದಂತೆ ತಡೆಯಲು ಗಲಾಟೆ ನಡೆದಿತ್ತು. ಘಟನೆ ಬಳಿಕ ಚಾಂದಿನಿ ನಾಯಕ್ ಅವರು ದೂರು ದಾಖಲಿಸಿದ್ದರು. ಇಷ್ಟೇ ಅಲ್ಲದೇ, ತಳ್ಳಾಟದ ಬಳಿಕ ಮೂರು ತಿಂಗಳ ಗರ್ಭಿಣಿ ಚಾಂದಿನಿ ನಾಯಕ್​ಗೆ ಗರ್ಭಪಾತವಾಗಿದೆ ಎಂಬ ಆರೋಪವೂ ಸಹ ಕೇಳಿ ಬಂದಿದೆ.

ಇದನ್ನೂ ಓದಿ: ಪುರಸಭಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ ಸಿದ್ದು ಸವದಿ

ಸವಿತಾ ಹುರಕಡ್ಲಿ ಅವರನ್ನು ಎಳೆದಾಡುತ್ತಿರುವ ವೀಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದಕ್ಕೆ ಸಂಬಂಧಿಸಿದಂತೆ ಶಾಸಕ ಸಿದ್ದು ಸವದಿ, ಬೆಂಬಲಿಗರಾದ ರವಿ ಜವಳಗಿ, ಪ್ರಹ್ಲಾದ್ ಸಣ್ಣಕ್ಕಿ, ರಾಜು ಚಮಕೇರ, ಸ್ನೇಹಲ್ ಅಂಗಡಿ ಸೇರಿದಂತೆ 31 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೌರವಕ್ಕೆ ಧಕ್ಕೆ, ಅಪಹರಣ, ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 120/a, 141, 143, 147, 148, 319, 321, 323 ಸೇರಿದಂತೆ 19 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಕೋರ್ಟ್ ನಿರ್ದೇಶನದ ಮೇರೆಗೆ ಮಹಾಲಿಂಗಪುರ ಠಾಣೆಯಲ್ಲಿ ಡಿಸೆಂಬರ್ 31 ರಂದು ಎಫ್‌ಐಆರ್ ದಾಖಲಾಗಿದೆ. ಜಮಖಂಡಿ ಪೊಲೀಸ್ ಉಪವಿಭಾಗದಿಂದ ಚಾಂದಿನಿ ನಾಯಕ್​ಗೆ ನೊಟೀಸ್ ನೀಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಜರು ಮಾಡಲು ಸ್ಥಳಕ್ಕೆ ಬಂದ ಸಿಬ್ಬಂದಿಗೆ ಸಹಕರಿಸುವಂತೆ ಕೋರಲಾಗಿದೆ.

ಘಟನೆಯಲ್ಲಿ ತಮ್ಮ ವಿರುದ್ದ ಮಾಡುತ್ತಿರುವ ಆರೋಪವನ್ನು ಸಿದ್ದು ಸವದಿ ತಳ್ಳಿಹಾಕಿದ್ದು, “ನಮ್ಮ ಪಕ್ಷದ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಕಾಂಗ್ರೆಸ್ನವರು ಅಪಹರಿಸಿದ್ದರು. ನಾನು ಅವರ ರಕ್ಷಣೆ ಮಾಡಲು ಪ್ರಯತ್ನಿಸಿದ್ದೆ. ಕಾಂಗ್ರೆಸ್‌‌ನವರೇ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...