Homeಮುಖಪುಟಕಚ್ಚಾ ತೈಲದ ದರ ಕಡಿಮೆ - ಆದರೂ ಪೆಟ್ರೋಲ್ ದರ ಗರಿಷ್ಠ!

ಕಚ್ಚಾ ತೈಲದ ದರ ಕಡಿಮೆ – ಆದರೂ ಪೆಟ್ರೋಲ್ ದರ ಗರಿಷ್ಠ!

ನಿನ್ನೆ ಬುಧವಾರ ಮತ್ತು ಇಂದು ಗುರುವಾರ ತೈಲ ಮಾರಾಟ ಕಂಪನಿಗಳು ಪೇಟ್ರೋಲ್, ಡಿಸೇಲ್ ದರಗಳನ್ನು ಏರಿಸಿವೆ. ಇದರ ಪರಿಣಾಮ ದೆಹಲಿಯಲ್ಲೀಗ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

- Advertisement -
- Advertisement -

ದೇಶದ ರಾಜಧಾನಿಯಲ್ಲಿ ಗುರುವಾರ ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ದರ ಲೀಟರ್‌ಗೆ 84.20 ರೂ.ಗೆ ಏರಿದೆ. ಡಿಸೇಲ್ ದರ 74.36 ರೂ ಏರಿದೆ. ತೈಲ ಮಾರಾಟ ಕಂಪನಿಗಳು ಗುರುವಾರ ಪೆಟ್ರೋಲ್ ದರವನ್ನು 23 ಪೈಸೆ ಮತ್ತು ಡಿಸೇಲ್ ದರವನ್ನು 24 ಪೈಸೆ ಏರಿಸಿವೆ. ಬುಧವಾರ ಪೆಟ್ರೋಲ್ ದರವನ್ನು 26 ಪೈಸೆ ಮತ್ತು ಡಿಸೇಲ್ ದರವನ್ನು 25 ಪೈಸೆ ಏರಿಸಿದ್ದು, ಸತತ ಎರಡನೇ ದಿನ ತೈಲ ಬೆಲೆ ಏರಿಕೆ ಕಂಡಿದೆ.

ಈ ಹಿಂದೆ 2018ರ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಪೆಟ್ರೋಲ್ ದರ ಗರಿಷ್ಠ 84 ರೂ. ಮುಟ್ಟಿದಾಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲ್‌ಗೆ 80 ಡಾಲರ್ ಇತ್ತು. ಸದ್ಯ ಕಚ್ಚಾ ತೈಲದ ದರ ಬ್ಯಾರೆಲ್‌ಗೆ 54 ಡಾಲರ್ ಇದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಏರುತ್ತಲೇ ಇದೆ.

ಸರ್ಕಾರಗಳ ಲೆವಿಯೇ ಕಾರಣ

ಕಚ್ಚಾ ತೈಲದ ದರ ಇಳಿದಿದ್ದರೂ, ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಲು ಸರ್ಕಾರ ವಿಧಿಸಿರುವ ಲೆವಿ/ತೆರಿಗೆಗಳೇ ಕಾರಣ. 2019ರ ಆರಂಭದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 19.18 ರೂ.ನಿಂದ 36.98 ರೂ.ಗೆ, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 15.83 ರೂ.ನಿಂದ 31.83 ರೂ.ಗೆ ಏರಿಸಿತು. ಸಾಂಕ್ರಾಮಿಕದಿಂದಾಗಿ ಕುಸಿದ ಆರ್ಥಿಕ ನಷ್ಟ ಸರಿದೂಗಿಸಲು ಸರ್ಕಾರ ಜನರ ಮೇಲೆಯೇ ಸುಂಕ ಹೆಚ್ಚಳದ ಹೊರೆ ಹಾಕಿತು.

ತಮ್ಮ ಆರ್ಥಿಕ ಸುಧಾರಣೆಗೆ ಹಲವು ರಾಜ್ಯ ಸರ್ಕಾರಗಳೂ ಪೆಟ್ರೋಲ್-ಡಿಸೇಲ್ ಮೇಲಿನ ವ್ಯಾಟ್ ತೆರಿಗೆ ಹೆಚ್ಚಿಸಿದವು. ಇವೆಲ್ಲವೂ ಗ್ರಾಹಕನಿಗೆ ಹೊರೆಯಾಗಿವೆ.

ಸದ್ಯ ದೇಶದ ರಾಜಧಾನಿಯಲ್ಲಿ ಪೆಟ್ರೋಲ್‌ನ ಚಿಲ್ಲರೆ ಮಾರಾಟ ದರದ ಶೇ.62ರಷ್ಟು ಸರ್ಕಾರದ ಲೆವಿಗಳ ರೂಪದಲ್ಲಿದೆ. ಡಿಸೇಲ್ ದರದ ಶೇ. 57ರಷ್ಟು ಲೆವಿಗಳ ರೂಪದಲ್ಲಿದೆ.


ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...