Homeಚಳವಳಿಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಇಲ್ಲಿದ್ದೇವೆ

- Advertisement -
- Advertisement -

ನಾನು ಪಂಜಾಬಿನಲ್ಲಿ ಸಿಹಿ ತಿನಿಸುಗಳನ್ನು ಮಾರಾಟ ಮಾಡುವ ಹಲವಾಯಿ, ನಮ್ಮದು ಸ್ವಂತ ಅಂಗಡಿಯಿದೆ. ನಾನು ನನ್ನ ಸಹೋದರರು ಅಂಗಡಿ ಮೇಲ್ವಿಚಾರಣೆ ನೋಡಿಕೊಳ್ಳುತ್ತೆವೆ. ಈಗ ನಮಗೆ ನಮ್ಮ ಅಂಗಡಿಗಳ ಬಗ್ಗೆ ಚಿಂತೆಯಿಲ್ಲ, ರೈತರು ಮತ್ತು ಅವರ ಹಕ್ಕುಗಳ ರಕ್ಷಣೆಯೆ ಮುಖ್ಯ. ಹಾಗಾಗಿ ನಾವು ಇಲ್ಲಿ ಸೇವೆ ನೀಡಲು ಬಂದಿದ್ದೇವೆ ಎನ್ನುತ್ತಾರೆ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಚಹಾ ಸೇವೆ ನೀಡುತ್ತಿರುವ ಗುರ್‌ನಾಮ್ ಸಿಂಗ್.

ಪಂಜಾಬಿನ ಗುರ್‌ನಾಮ್ ಸಿಂಗ್, ಟಿಕ್ರಿ ಗಡಿಯಲ್ಲಿ ಕಳೆದ ಡಿಸೆಂಬರ್ ಐದನೇ ತಾರೀಖಿನಿಂದ ಸೇವೆ ಎಂದುಕೊಂಡು ಪ್ರತಿಭಟನಾ ನಿರತರಿಗೆ ಮತ್ತು ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಟೀ ಸರಬರಾಜು ಮಾಡುತ್ತಿದ್ದಾರೆ. ಎರಡು ದೊಡ್ಡ ಪಾತ್ರೆಗಳಲ್ಲಿ ಬೆಳಗ್ಗೆ ನಾಲ್ಕು ಗಂಟೆಗೆ ಟೀ ಮಾಡಲು ಶುರು ಮಾಡುವ ಇವರು ನಿರಂತರವಾಗಿ ರಾತ್ರಿ 9 ಗಂಟೆಯವರೆಗೆ ಟೀ ತಯಾರಿಸುತ್ತಾರೆ.

ಇದನ್ನೂ ಓದಿ: ರೈತರಿಗೆ ಕೊರೊನಾ ಸಾಂಕ್ರಮಿಕದಿಂದ ರಕ್ಷಣೆ ನೀಡಲಾಗಿದೆಯೆ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಟೀ ತಯಾರಿಸಲು ಬೇಕಾಗುವ ಹಾಲು ಪಂಜಾಬ್ ಮತ್ತು ಹರಿಯಾಣದ ರೈತರು ಸರಬರಾಜು ಮಾಡುತ್ತಾರೆ. ಟೀ ಪುಡಿ ಮತ್ತು ಸಕ್ಕರೆ ಇಲ್ಲಿಯೇ ಇರುವ ಅನೇಕ ಲಂಗರ್‌ಗಳು ಮತ್ತು ಹಲವು ಸೇವಾ ಸಂಸ್ಥೆಗಳು ನೀಡುತ್ತವೆ. ಸೇವೆ ಮಾಡುವ ಮನಸ್ಸು ಇದ್ದರೇ ಸಾಕು ಎಲ್ಲಾ ಸೌಲಭ್ಯಗಳು ತಾವಾಗಿಯೇ ದೊರೆಯುತ್ತವೆ ಎಂದು ಹೇಳುತ್ತಾರೆ ಗುರುನಾಮ್.

ನಾನು, ನನ್ನ ಸಹೋದರರು ಪಂಜಾಬಿನಲ್ಲಿ ನಮ್ಮ ಕುಟುಂಬನ್ನು ಬಿಟ್ಟು ಇಲ್ಲಿಗೆ ಬಂದಿದ್ದೇವೆ. ಅವರ ಚಿಂತೆ ನಮಗಿಲ್ಲ ಎಂದಲ್ಲ, ಅದಕ್ಕೂ ಹೆಚ್ಚು ರೈತರ ಈಗಿನ ಪರಿಸ್ಥಿತಿಯಲ್ಲಿ ಅವರ ಜೊತೆಗೆ ನಿಲ್ಲುವುದು ನಮ್ಮ ಜವಾಬ್ದಾರಿ. ಅದೆಷ್ಟೇ ದಿನವಾಗಲಿ ನಾವು ರೈತರ ಜೊತೆ ಇರುತ್ತೇವೆ. ಅವರೆ ಇಲ್ಲ ಎಂದರೆ ದೇಶ ಉಳಿಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸುತ್ತಾರೆ.

ಚಳಿ, ಮಳೆ ಹೆಚ್ಚಾಗಿದೆ ಇಂತಹ ಸ್ಥಿತಿಯಲ್ಲೂ ಕಿಸಾನ್ ಹಿಂದೆ ಸರಿಯುತ್ತಿಲ್ಲ. ನಾವು ರೈತರ ಮಕ್ಕಳು, ಅವರ ನೋವು ನಮ್ಮ ನೋವು ಒಂದೇ. ಚಳಿ ಹೆಚ್ಚಾದಾಗ ಒಂದು ಲೋಟ ಚಹ ಕೂಡ ಕೊಂಚ ನೆಮ್ಮದಿ ನೀಡಬಲ್ಲದು. ಹಾಗಾಗಿ ಈ ಸೇವೆ ಸಲ್ಲಿಸುತ್ತಿದ್ದೆನೆ. ನನ್ನ ಸಹೋದರರು ಇಬ್ಬರು ಅಡುಗೆ ಮಾಡಿ ಬಡಿಸುತ್ತಿದ್ದಾರೆ. ಅವರದ್ದು ಮತ್ತೊಂದು ರೀತಿಯ ಸೇವೆ. ಮೋದಿ ಸರ್ಕಾರ ನಮ್ಮ ಮಾತುಗಳನ್ನು ಕೇಳಬೇಕು. ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗುರ್‌ನಾಮ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...