Homeಚಳವಳಿವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ...

ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ಕೃಷಿ ಕಾಯ್ದೆಗಳ ಪರವಾಗಿ ಕಟ್ಟರ್ ರೈತರ ಜೊತೆ ಸಂವಾದ ನಡೆಸಬೇಕಿತ್ತು.

- Advertisement -
- Advertisement -

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಇಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇಂದು ಬೆಳಿಗ್ಗೆಯೇ ರೈತರ ಮೇಲೆ ಮುಗಿಬಿದ್ದಿರುವ ಹರಿಯಾಣ ಪೊಲೀಸರು ಕರ್ನಾಲ್ ಟೋಲ್ ಪ್ಲಾಜಾ ಬಳಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಸಿಡಿಸಿ ಹೋರಾಟ ಹತ್ತಿಕ್ಕಲು ಮುಂದಾಗಿದ್ದರು. ಆದರೂ ಪೊಲೀಸರ ಭದ್ರಕೋಟೆ ಮುರಿದ ರೈತರು ಕೈಮ್ಲಾ ಗ್ರಾಮ ಪ್ರವೇಶಿಸಿ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ.

ಈ ಹಿಂದೆ ಇದೇ ರೈತರು ಸಿಎಂ ಕಟ್ಟರ್‌ರವರಿಗೆ ಕಪ್ಪು ಬಾವುಟ ತೋರಿಸಿದ್ದಲ್ಲದೆ ಅವರು ಬೆಂಗಾವಲು ವಾಹನವನ್ನು ರೈತರು ತಡೆದಿದ್ದರು. ಇದರಿಂದ ಕೆರಳಿದ ಪೊಲೀಸರು 13 ರೈತ ಮುಖಂಡರ ಮೇಲೆ ಕೊಲೆಯತ್ನದ ದೂರು ದಾಖಲಿಸಿದ್ದರು. ಆದರೂ ತಲೆಕೆಡಿಸಿಕೊಳ್ಳದ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಇಂದು ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.

ಇಂದು ಬೆಳಿಗ್ಗೆ ಹರಿಯಾಣದ ರೈತರ ಮೇಲೆ ದಾಳಿಯನ್ನು ಕಾಂಗ್ರೆಸ್ ವಕ್ತಾರ ರಣ್‌ದೀಪ್‌ ಸಿಂಗ್ ಸುರ್ಜೇವಾಲ ತೀವ್ರವಾಗಿ ಖಂಡಿಸಿದ್ದಾರೆ. “ಮನೋಹರ್ ಲಾಲ್‌ ಕಟ್ಟರ್‌ಜಿ ದಯವಿಟ್ಟು ನೀವು ಇಂದು ಕೈಮ್ಲಾ ಗ್ರಾಮದ ಕಾರ್ಯಕ್ರಮವನ್ನು ಕೈಬಿಡಿ. ದೇಶಕ್ಕೆ ಅನ್ನ ಕೊಡುವ ರೈತರ ವಿಚಾರದಲ್ಲಿ ಭಾವನಾತ್ಮಕ ನಾಟಕ ಆಡಬೇಡಿ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ನೀವು ರೈತರೊಂದಿಗೆ ಮಾತನಾಡಬೇಕೆಂದಿದ್ದರೆ ಕಳೆದ 46 ದಿನಗಳಿಂದ ಹೋರಾಡುತ್ತಿರುವ ರೈತರೊಂದಿಗೆ ಮಾತನಾಡಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...