Homeಮುಖಪುಟಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳ ಸರ್ವಾನುಮತದ ನಿರ್ಧಾರ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದೆ.

ಸೋಮವಾರ ಸುಪ್ರೀಮ್‌ ಕೋರ್ಟ್‌ನಲ್ಲಿ ರೈತ ಪ್ರತಿಭಟನೆಗೆ ಸಂಬಂಧಿಸಿದ ವಿಚಾರಣೆಯ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮೋರ್ಚಾ, “ವಿಚಾರಣೆಯ ವೇಳೆ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಮತ್ತು ಹಿತಕರವಾದ ಮಾತುಗಳನ್ನು ಆಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್‌ಗೆ ಗೌರವವನ್ನು ವ್ಯಕ್ತಪಡಿಸುತ್ತೇವೆ” ಎಂದಿದೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

“ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಿವೆ.

ನ್ಯಾಯಾಲಯದಲ್ಲಿ ಸರ್ಕಾರದ ತನ್ನ ಧೋರಣೆ ಮತ್ತು ನಡೆಗಳಿಂದ, ಸಮಿತಿಯ ಮುಂದೂ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಸಂಯುಕ್ತ ಮೋರ್ಚಾದ ದರ್ಶನ್‌ ಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಸುಪ್ರೀಂ ಕೋರ್ಟ್‌, ಮೊಂಡು ಹಿಡಿದಿರುವ ಸರ್ಕಾರದ ಧೋರಣೆಯನ್ನು ನೋಡಿ, ಸಮಿತಿಯೊಂದನ್ನು ನೇಮಿಸುವ ಸಾಧ್ಯತೆ ಇದೆ. ಆದರೆ ನಮ್ಮ ವಕೀಲರು ನ್ಯಾಯಾಲಯದ ಎದುರು, ಹೋರಾಟದಲ್ಲಿ ಪಾಲ್ಗೊಂಡಿರುವ ಯಾವುದೇ ಸಂಘಟನೆಗಳೊಂದಿಗೆ ಸಮಾಲೋಚಿಸದೇ ನೇಮಿಸುವ ಸಮಿತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ವಿಚಾರಣೆಯ ಬಳಿಕ ನಮ್ಮ ವಕೀಲರೊಂದಿಗೆ ದೀರ್ಘಕಾಲ ಸಮಾಲೋಚಿಸಿದ ಬಳಿಕ ಸಮಿತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು, ನಾವು ಯಾವುದೇ ಸಮಿತಿಯ ಎದುರು ಹೋಗದಿರಲು ಸರ್ವಾನುಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ ನಮ್ಮ ವಕೀಲರು ಹಾಗೂ ಇತರೆ ವಕೀಲರ ಮೂಲಕ- ಹರೀಶ್‌ ಸಾಳ್ವೆ- ಮಂಗಳವಾರ ವಿಚಾರಣೆ ನಡೆಸಲು ಮತ್ತು ಸುಪ್ರೀಂ ಕೋರ್ಟ್‌ ಸಲಹೆಗೆ ಸಮ್ಮತಿ ಪಡೆಯಲು ಮನವಿ ಮಾಡಿತ್ತು. ಮಂಗಳವಾರಕ್ಕೆ ಈ ಕುರಿತು ತೀರ್ಪು ನೀಡಲು ಎಲ್ಲ ಸಿದ್ಧತೆಗಳು ನಡೆದಿದ್ದು, ಈ ಬೆಳವಣಿಗೆಗಳಿಂದ ನಾವು, ನಮ್ಮ ವಕೀಲರು ಮತ್ತು ರೈತ ಸಮೂಹ ತೀವ್ರವಾಗಿ ನಿರಾಶರಾಗಿದ್ದೇವೆ. ಹಾಗಾಗಿ ಜಗತ್ತಿಗೆ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವುದಕ್ಕಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ಆಗಿರುವುದರಿಂದ ಮತ್ತು ಸಾರ್ವಜನಿಕ ಆಸಕ್ತಿ ಇರುವುದರಿಂದ, ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದೆ.

ಮೋರ್ಚಾದ ಎಸ್‌ ಬಲ್ವೀರ್‌ ಎಸ್‌ ರಾಜೇವಾಲ್‌, ಡಾ. ದರ್ಶನ್‌ಪಾಲ್‌, ಎಸ್‌ ಪ್ರೇಮ್‌ ಎಸ್‌ ಭಂಗು, ಎಸ್‌ ರಾಜೀಂದರ್‌ ಸಿಂಘ್‌ದೀಪ್‌ ಸಿಂಘ್‌ ವಾಲ ಮತ್ತು ಎಸ್‌ ಜಗ್‌ಮೋಹನ್‌ ಸಿಂಘ್‌ ಅವರು, ನ್ಯಾಯವಾದಿಗಳಾದ ದುಶ್ಯಂತ ದಾವೆ, ಎಸ್‌ ಪ್ರಶಾಂತ್‌ ಭೂಷಣ್‌, ಎಸ್‌ ಕಾಲಿನ್‌ ಗೋನ್ಸಾವ್ಲಿಸ್‌ ಮತ್ತು ಎಚ್‌ ಎಸ್‌ ಫೂಲ್ಕಾ ಅವರೊಂದಿಗೆ ನಡೆಸಿದ ಸಮಾಲೋಚನೆಯ ಬಳಿಕ ಈ ಹೇಳಿಕೆ ನೀಡಿರುವುದಾಗಿ ಮೋರ್ಚಾ ಪ್ರಕಟಣೆ ತಿಳಿಸಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....