Homeಕರ್ನಾಟಕರೈತ ಹೋರಾಟ: ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಗೆ ರಾಜ್ಯ ರೈತ ಸಂಘ ಆಕ್ಷೇಪ

ರೈತ ಹೋರಾಟ: ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಗೆ ರಾಜ್ಯ ರೈತ ಸಂಘ ಆಕ್ಷೇಪ

- Advertisement -
- Advertisement -

ಕೃಷಿ ಮಸೂದೆಗಳ ಸಾಧಕ-ಬಾಧಕಗಳನ್ನು ಚರ್ಚಿಸಲು ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಮಿತಿಯ ಬಗ್ಗೆ ಆಕ್ಷೇಪಣೆಯೆತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪ್ರಸ್ತುತ ಸಮಿತಿಯಿಂದ ರೈತ ಪರ ನಿಲುವು ಸಾಧ್ಯವೆ ಎಂದು ಪ್ರಶ್ನಿಸಿದೆ.

ಮಸೂದೆಗಳ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶವನ್ನು ಸ್ವಾಗತಿಸಿರುವ ರೈತ ಸಂಘವು, ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲು ಮಾಡಿರುವ ಸಮಿತಿಯ ಬಗ್ಗೆ ತನ್ನ ಆಕ್ಷೇಪಣೆ ಇದೆ ಎಂದಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

“ಸಮಿತಿಗೆ ನೇಮಕವಾಗಿರುವ ನಾಲ್ವರು ಸದಸ್ಯರಲ್ಲಿ ಡಾ. ಅಶೋಕ್‌ ಗುಲಾತಿ ಮತ್ತು ಡಾ. ಪಿ.ಕೆ. ಜೋಷಿ  ಮಸೂದೆಗಳ ಪರ ತಮ್ಮ ಅಭಿಪ್ರಾಯವನ್ನು ಈಗಾಗಲೆ ಬಹಿರಂಗಪಡಿಸಿದ್ದಾರೆ. ಮತ್ತಿಬ್ಬರು ಸದಸ್ಯರಾದ ಭೂಪಿ೦ದರ್‌ ಸಿ೦ಗ್‌ ಮನ್‌ ಮತ್ತು ಶೆತ್ಕಾರಿ ಸಂಘಟನೆಯ ಪ್ರಮುಖರಾದ ಅನಿಲ್‌ ಗನ್‌ವಠ್‌‌ ಕೇಂದ್ರ ಕೃಷಿ ಸಚಿವರಿಗೆ ಈಗಾಗಲೆ ಪತ್ರ ಬರೆದು ಕೃಷಿ ಮಸೂದೆಗಳನ್ನು ಸ್ವಾಗತಿಸಿದ್ದಾರೆ. ಇವರುಗಳು ಇರುವ ಸಮಿತಿಯಿ೦ದ ರೈತರ ಪರ ನಿಲುವುಗಳನ್ನು ಬಯಸುವುದು ಸಾಧ್ಯವೆ” ಎಂದು ರೈತ ಸಂಘ ಪ್ರಶ್ನಿಸಿದೆ.

ಕೃಷಿ ಮಸೂದೆಗಳಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಾಡಿದ ಪ್ರಯತ್ನ ಮತ್ತು ಅದರ ಹಿನ್ನಲೆ, ಸುಗ್ರೀವಾಜ್ಞೆಗಳಿಗೆ ಅಂಗೀಕಾರ ಪಡೆಯಲು ರಾಜ್ಯಸಭೆಯಲ್ಲಿ ಅನುಸರಿಸಿದ ಅಸಾಂವಿಧಾನಿಕ ನಡವಳಿಕೆ, ಮಸೂದೆಗಳ ವಿರುದ್ದ ಧ್ವನಿ ಎತ್ತಿ ಬೀದಿಗಿಳಿದ ರೈತ ಸಮುದಾಯದ ಜೊತೆ ನಡೆದುಕೊಂಡ ರೀತಿಯನ್ನು ರೈತ ಸಂಘವು ಅನಾಗರೀಕ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳನ್ನು ಅಮಾನತು ಮಾಡಿದೆ.

ಇದನ್ನೂ ಓದಿ: ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...