Homeಕರ್ನಾಟಕಇಂದು ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸುವ ನೂತನ ಸಚಿವರ ಪಟ್ಟಿ ಇಲ್ಲಿದೆ...

ಇಂದು ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸುವ ನೂತನ ಸಚಿವರ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, "ಏಳರಿಂದ ಎಂಟು ಶಾಸಕರು ಪ್ರಮಾಣ ಸ್ವೀಕರಿಸಲಿದ್ದಾರೆ. ಕೆಲವು ಶಾಸಕರಿಗೆ ಈ ಸಂಬಂಧ ಸೂಚನೆಯನ್ನೂ ನೀಡಲಾಗಿದೆ" ಎಂದು ಹೇಳಿದರು.

- Advertisement -
- Advertisement -

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ಹಿಂದೆ ಹೇಳಿದ್ದರು. ಅದರಂತೆ ಇಂದು (ಬುಧವಾರ) 7-8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ನಾಯಕತ್ವ ಬದಲಾವಣೆ ಸೇರಿ ಎಲ್ಲ ರೀತಿಯ ಊಹಾಪೋಹಗಳಿಗೆ ವರಿಷ್ಠರು ತೆರೆ ಎಳೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಹಸಿರು ನಿಶಾನೆ ತೋರಿದ್ದು, ಎಲ್ಲ ಹಿರಿಯ ಸಚಿವರನ್ನು ಸಂಪುಟದಲ್ಲಿ ಮುಂದುವರಿಸಲು ಸೂಚಿಸಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ 1 ಲಕ್ಷ ರೂ. ಲಂಚ ಪಡೆದ PSI ಸೌಮ್ಯ: ACB ಅಧಿಕಾರಿಗಳಿಂದ…

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, “ಏಳರಿಂದ ಎಂಟು ಶಾಸಕರು ಪ್ರಮಾಣ ಸ್ವೀಕರಿಸಲಿದ್ದಾರೆ. ಕೆಲವು ಶಾಸಕರಿಗೆ ಈ ಸಂಬಂಧ ಸೂಚನೆಯನ್ನೂ ನೀಡಲಾಗಿದೆ” ಎಂದು ಹೇಳಿದರು.

ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸಂಪುಟದಿಂದ ಒಬ್ಬ ಸಚಿವರನ್ನು ಕೈಬಿಡಬೇಕಾಗಬಹುದು. ಯಾರು ಎಂಬ ಬಗ್ಗೆ ಚರ್ಚೆ ನಡೆದಿದೆ” ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಮೂವರು ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಬಕಾರಿ ಸಚಿವ ಎಚ್‌.ನಾಗೇಶ್‌ ಅಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೆಸರೂ ಪ್ರಸ್ತಾಪವಾಗಿವೆ.

ಇದನ್ನೂ ಓದಿ: ಜೋ ಬೈಡೆನ್ ಪ್ರಮಾಣವಚನ ಸ್ವೀಕಾರ ಹಿನ್ನೆಲೆ: ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್!

ಬೆಳಗಾವಿ ಜಿಲ್ಲೆಯವರಾದ ಉಮೇಶ ಕತ್ತಿ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದರಿಂದ ಆ ಜಿಲ್ಲೆಗೆ ಪ್ರಾತಿನಿಧ್ಯ ಅತ್ಯಧಿಕವಾಗುತ್ತದೆ. ಕತ್ತಿಯವರಿಗಾಗಿ ಅದೇ ಜಿಲ್ಲೆಯ ಜೊಲ್ಲೆ ತ್ಯಾಗ ಮಾಡುವುದು ಅನಿವಾರ್ಯ. ಹಿರಿಯ ಶಾಸಕ ಅಂಗಾರ ಅವರಿಗೆ ಅವಕಾಶ ಮಾಡಿಕೊಡಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಡಬಹುದು ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಶಿಕಲಾ ಜೊಲ್ಲೆ, “ಸಂಪುಟದಿಂದ ನನ್ನನ್ನು ಕೈಬಿಡುತ್ತಾರೆ ಎಂಬ ಸುದ್ದಿ ಈ ಬಾರಿಯೂ ಕೇಳಿ ಬಂದಿದೆ. ಈ ಬಗ್ಗೆ ಯಾರೂ ಮಾಹಿತಿ ನೀಡಿಲ್ಲ. ಒಂದು ವೇಳೆ ಕೈಬಿಟ್ಟರೆ, ಪಕ್ಷಕ್ಕಾಗಿ ದುಡಿಯಲು ಸಿದ್ಧಳಿದ್ದೇನೆ” ಎಂದು ಹೇಳಿದ್ದಾರೆ.

ಮಹಿಳಾ ಕೋಟಾದಲ್ಲಿ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅಥವಾ ಕಾರವಾರದ ರೂಪಾಲಿ ನಾಯ್ಕ್‌ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬಹುದು. ಪೂರ್ಣಿಮಾ ಅವರು ಗೊಲ್ಲ ಸಮುದಾಯಕ್ಕೆ ಸೇರಿದ್ದರಿಂದ ಆ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದಂತೆಯೂ ಆಗುತ್ತದೆ ಎಂದೂ ಹೇಳಲಾಗುತ್ತಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.

ಒಟ್ಟಿನಲ್ಲಿ ಸರ್ಕಾರದಿಂದ ಇನ್ನೂ ಅದಿಕೃತ ಆದೇಶ ಹೊರಬಿದ್ದಿಲ್ಲ. ಬುಧವಾರ ಮಧ್ಯಾಹ್ನದ ನಂತರ ಬಿಜೆಪಿ ಪಾಳಯದಲ್ಲಿ ಏನು ನಡೆಯಲಿದೆ ಎಂಬುದು ಸ್ಪಷ್ಟವಾಗಿ ತಿಳಿಯಲಿದೆ.


ಇದನ್ನೂ ಓದಿ: ವಂಶಾಡಳಿತ ರಾಜಕಾರಣವೇ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...