ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿಯವರು ತಕ್ಷಣ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ಪುರಸ್ಕರಿಸದಿದ್ದರೆ ನಾನೇ ಮೊದಲು ಬೀದಿಗಿಳಿದು ಹೋರಾಟ ಆರಂಭಿಸುತ್ತೇನೆ” ಎಂದು ಬರೆದಿದ್ದಾರೆ.
ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. @CMofKarnataka ಅವರು ತಕ್ಷಣ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ಪುರಸ್ಕರಿಸದಿದ್ದರೆ ನಾನೇ ಮೊದಲು ಬೀದಿಗಿಳಿದು ಹೋರಾಟ ಆರಂಭಿಸುತ್ತೇನೆ. pic.twitter.com/ZfkZTVGik4
— Siddaramaiah (@siddaramaiah) January 13, 2021
ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!
ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಅವರು, “ಮೀಸಲಾತಿಯನ್ನು ವಿರೋಧ ಮಾಡಿರುವವರು, ಮೀಸಲಾತಿಯ ಪಾಠ ಮಾಡಲು ಬರುತ್ತಿದ್ದಾರೆ. ಈ ಬಗ್ಗೆ ವರದಿ ಬರಲಿ, ರಾಜ್ಯ ಸರ್ಕಾರ ಶಿಫಾರಸ್ಸು ಮಾಡಲಿ, ಒಂದು ವೇಳೆ ಕೇಂದ್ರ ಸರ್ಕಾರ ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸದೇ ಹೋದರೆ ಬೀದಿಗೆ ಇಳಿದು ಹೋರಾಟ ಮಾಡುತ್ತೇನೆ. ನಾನು ರಾಜಕೀಯದಲ್ಲಿ ಇರಲಿ ಇಲ್ಲದೇ ಇರಲಿ, ನನ್ನ ಉಸಿರು ಇರುವವರೆಗೂ ನಾನು ಸಾಮಾಜಿಕ ನ್ಯಾಯದ ಪರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸೆಂಬರ್ 2 ರಂದು ಸಿದ್ದರಾಮಯ್ಯ, “ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಎಸ್ಟಿ ಮೀಸಲಾತಿ ಹೋರಾಟಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ” ಎಂದು ಹೇಳಿದ್ದರು.
ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ


