Homeಕರ್ನಾಟಕಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ

- Advertisement -
- Advertisement -

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ”ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ. ಅದು ನನ್ನ ಅಪರಾಧ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

“ಇದು ಬೆಂಗಳೂರು-ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು” ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ವಿಜಯಪುರ ಶಾಸಕ ಬಸನಗೌಡ ಪಾಟಿಲ ಯತ್ನಾಳ್, ಸಂಕ್ರಾಂತಿಯ ನಂತರ ಯಡಿಯೂರಪ್ಪ ಅವರ ಅಧಃಪತನ ಆರಂಭವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಮೂರು ಬ್ಲ್ಯಾಕ್‌ಮೇಲರ್‌ಗಳನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ. ಸಂಕ್ರಾಂತಿಯ ನಂತರ ಅವರ ಅಧಃಪತನ ಪ್ರಾರಂಭವಾಗುತ್ತದೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಬೊಮ್ಮನಹಳ್ಳಿಯ ಶಾಸಕ ಸತಿಶ್ ರೆಡ್ಡಿ ಟ್ವೀಟ್ ಮಾಡಿ, “ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಸುನಿಲ್ ಕುಮಾರ್ ಕಾರ್ಕಳ ಟ್ವೀಟ್ ಮಾಡಿ, “ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ. ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ

ಮತ್ತೋರ್ವ ವಿಧಾನ ಪರಿಷತ್ ಸದಸ್ಯರಾದ ಎಚ್‌ ವಿಶ್ವನಾಥ್ ಮೈಸೂರಿನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, “ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪನವರ ಪ್ರತಿಷ್ಠೆ ಡೆಮಾಲಿಷ್ ಆಗೋಕೂ ವಿಜಯೇಂದ್ರರೇ ಕಾರಣ. ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲಾದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಬಿಎಸ್ ಯಡಿಯೂರಪ್ಪರೇ ಹೈಕಮಾಂಡ್” ಎಂದು ಕಿಡಿ ಕಾರಿದ್ದಾರೆ.

“ಯೋಗೇಶ್ವರ್‌ ಅವರದ್ದು ಟೋಟಲಿ ಬ್ಲಾಕ್ ಮೇಲ್ ತಂತ್ರ. ಆ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ. ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದುಕೊಳ್ಳೋದೆ ಮಾನದಂಡವೇ..? ಯೋಗೇಶ್ವರ್ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ರೆ ಮತ್ತೇನು ಮಾಡಿಲ್ಲ. ಈ ಎಲ್ಲ ಬೆಳವಣಿಗೆಯಿಂದ ನನಗೆ ನೋವಾಗಿದೆ. ನಾವು ಮನುಷ್ಯರು, ನಮಗೂ ಹೃದಯ ಇದೆ, ನಮಗೂ ನೋವಾಗುತ್ತೆ. ಯಡಿಯೂರಪ್ಪನವರೇ ಸಿದ್ಧಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನು ಸಿದ್ಧಲಿಂಗೇಶ್ವರ ಕ್ಷಮಿಸೋದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಭಿಕ್ಷೆಯಿಂದಲೇ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಮಾತಿಗೆ ತಪ್ಪಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವದ ಬಗ್ಗೆ ಅಸಮಾಧಾನಗೊಂಡು ಬಂಡೆದ್ದು ಬಂದ ಎಲ್ಲ 17 ಮಂದಿಗೂ ಸಚಿವ ಸ್ಥಾನ ನೀಡುವುದು ಆದ್ಯತೆ ಆಗಿತ್ತು. ನಾವು ಬಂಡೇಳದಿದ್ದರೆ, ಬಿಜೆಪಿ ಸರ್ಕಾರ ರಚನೆ ಆಗಲು ಅವಕಾಶವೇ ಇರಲಿಲ್ಲ” ಎಂದು ಕಿಡಿ ಕಾರಿದ್ದಾರೆ.

ಇನ್ನು ಹಾಲಿ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದ್ದು, ಬೇರೆ ಯಾವುದಾದರೂ ಸಮನಾಂತರ ಹುದ್ದೆ ನೀಡುವುದಾಗಿ ಭರವಸೆ ನೀಡಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೈತರ ಕೊರಳಿಗೆ ಬಿದ್ದ ರೇಶಿಮೆ ಕುಣಿಕೆ; ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅವಲೋಕನ

ಆದರೆ ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.

ಬಳ್ಳಾರಿಯ ರೆಡ್ಡಿ ಸಹೋದರರಾದ ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರು ಮುನಿಸಿಕೊಂಡು ಹೊಸಪೇಟೆಯಲ್ಲಿ ನಡೆದ ಜನಸೇವಕ ಸಮಾವೇಶ ಬಹಿಷ್ಕರಿಸಿದ್ದಾರೆ.

ಒಟ್ಟಾರೆಯಾಗಿ ಈಗ ಬಿಜೆಪಿಯ ಒಳಗೆ ಬಿರುಕು ಬಿಡಲು ಪ್ರಾರಂಭವಾಗಿದ್ದು, ಇದು ಬಿರುಸಾಗುತ್ತಲೇ ಇದೆ. ಬಹುಶಃ ಈ ತಾಪತ್ರಯದಿಂದಲೆ ಯಡಿಯೂರಪ್ಪನವರು ಇಷ್ಟುದಿನ ಸಂಪುಟ ವಿಸ್ತರಣೆಗೆ ಮೀನ-ಮೇಷ ಎಣಿಸುತ್ತಿದ್ದರು ಎನಿಸುತ್ತಿದೆ.

ಈ ಭಿನ್ನಮತೀಯರ ಅಸಮಾಧಾನವನ್ನು ಹತ್ತಿಕ್ಕಲು ಯಡಿಯೂರಪ್ಪನವರು ಯಾವ ತಂತ್ರ ಬಳಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ


ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....