Homeಕರ್ನಾಟಕಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

ಜನರ ದುಡ್ಡು ತಿಂದು ಜೈಲಿಗೆ ಹೋಗುವುದೆ ಶಿವಮೊಗ್ಗ ಮುಖಂಡನ ಸಾಧನೆ ಎಂದು ಯಡಿಯೂರಪ್ಪರಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಯಡಿಯೂರಪ್ಪ ಅವರೂ ಹೆಚ್. ವಿಶ್ವನಾಥ್‌ರನ್ನು ಮಂತ್ರಿ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, “ಅವರಿಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008 ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ” ಎಂದು ಹೆಚ್‌. ವಿಶ್ವನಾಥ್‌ಗೆ ತಿರುಗೇಟು ನೀಡಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಸುಪ್ರೀಂಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

“ಕಳೆದ 48 ದಿನಗಳಲ್ಲಿ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ” ಎಂದು ಟ್ವಿಟ್ಟರ್‌ನಲ್ಲಿ ಆಪಾದಿಸಿದ್ದಾರೆ.

’ವಿಶ್ವ ಮಾನವರಾಗುವುದೆಂದರೆ ಪ್ರತಿ ವ್ಯಕ್ತಿಯನ್ನು ಅವರಿದ್ದಂತೆ ಒಪ್ಪಿಕೊಳ್ಳುವುದು’

“ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿದ್ದಾರಾ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ 3 ಕಾಯ್ದೆಗಳು ಮತ್ತು ನೂರೊಂದು ಸುಳ್ಳುಗಳು: ನಾಡಿನ ಜನರಿಗೆ ಸಿದ್ದರಾಮಯ್ಯ ಪತ್ರ

“ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಎಂದೂ ಹೇಳುತ್ತಾರೆ, ಇನ್ನೊಂದೆಡೆ ಕುರಿ, ಕೊಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಆಹಾರ, ಸಂಸ್ಕೃತಿ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು” ಎಂದು ಸಿದ್ದರಾಮಯ್ಯ ಬಿಜೆಪಿಗೆ ಬಹುತ್ವದ ಪಾಠ ಮಾಡಿದ್ದಾರೆ.

“ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜನರ ದುಡ್ಡು ತಿಂದು ಜೈಲಿಗೆ ಹೋಗುವುದೆ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...