Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...