ದೆಹಲಿ ಹೈಕೋರ್ಟ್‌ನಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ಬಳಕೆದಾರರ ಚಟುವಟಿಕೆಗಳನ್ನು ಪರಿಶೀಲಿಸಲು ಕಂಪನಿಗೆ ಅಧಿಕಾರ ನೀಡುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.
ವಕೀಲ ಚೈತನ್ಯ ರೋಹಿಲ್ಲಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಅವರು ತಮ್ಮ ಅರ್ಜಿಯಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ವ್ಯಕ್ತಿಯ ಖಾಸಗೀತನದ ಹಕ್ಕಿನ ಉಲ್ಲಂಘನೆಯಾಗಿದೆ ಹೇಳಿದ್ದಾರೆ.
ಖಾಸಗೀತನದ ಹಕ್ಕನ್ನು ಸುಪ್ರೀಂ ಕೋರ್ಟ್ ಮೂಲಭೂತ ಹಕ್ಕು ಎಂದು ಘೋಷಿಸಿದೆ.
ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ
ಸುರಕ್ಷತೆಯ ವಿಷಯದಲ್ಲಿ ವಾಟ್ಸಾಪ್ ಮತ್ತು ಸಿಗ್ನಲ್ – ಯಾವುದು ಉತ್ತಮ? Comparison Between WhatsApp and Signal
ಅರ್ಜಿಯಲ್ಲಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಪ್ಲಾಟ್‌ಫಾರ್ಮ್‌ಗಳು ಈಗಾಗಲೇ ಬಳಕೆದಾರರ ಡೇಟಾವನ್ನು ಮೂರನೇ ವ್ಯಕ್ತಿಯೊಂದಿಗೆ ಅನಧಿಕೃತ ರೀತಿಯಲ್ಲಿ ಹಂಚಿಕೊಳ್ಳುತ್ತಿವೆ. ಸರ್ಕಾರದಿಂದ ಅನುಮತಿ ಪಡೆಯದೆ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ರೂಪಿಸಲಾಗಿದೆ” ಎಂದು ಆರೋಪಿಸಲಾಗಿದೆ.
ಅರ್ಜಿದಾರರು ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿ ಮತ್ತು ವ್ಯಕ್ತಿಗಳ ಖಾಸಗಿ ಹಕ್ಕನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಬಳಕೆಗೆ ಮಾರ್ಗಸೂಚಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ವಾಟ್ಸಾಪ್ ಕಳೆದ ವಾರ ತನ್ನ ಗೌಪ್ಯತೆ ನೀತಿಯನ್ನು ನವೀಕರಿಸಿದ್ದು, ಫೆಬ್ರವರಿ 8 ರ ನಂತರ ಅದರ ನಿಯಮಗಳು ಮತ್ತು ಷರತ್ತುಗಳನ್ನು ಬಳಕೆದಾರರು ಒಪ್ಪಿಕೊಳ್ಳುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು


