Homeಮುಖಪುಟಅಹಂಕಾರಿ ಮೋದಿ ಸರ್ಕಾರದ ವಿರುದ್ಧ ರೈತರು ನಡೆಸುವ ಸತ್ಯಾಗ್ರಹದಲ್ಲಿ ಭಾಗಿಯಾಗಿ: ರಾಹುಲ್ ಗಾಂಧಿ

ಅಹಂಕಾರಿ ಮೋದಿ ಸರ್ಕಾರದ ವಿರುದ್ಧ ರೈತರು ನಡೆಸುವ ಸತ್ಯಾಗ್ರಹದಲ್ಲಿ ಭಾಗಿಯಾಗಿ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಇಂದು ಒಂಬತ್ತನೇ ಸುತ್ತಿನ ಮಾತುಕತೆಗೆ ರೈತರನ್ನು ಆಹ್ವಾನಿಸಿದೆ.

- Advertisement -
- Advertisement -

ದೇಶದ ಅನ್ನದಾತರು ತಮ್ಮ ಹಕ್ಕುಗಳಿಗಾಗಿ ಅಹಂಕಾರಿ ಮೋದಿ ಸರ್ಕಾರದ ವಿರುದ್ಧ ಸತ್ಯಾಗ್ರಹ ಮಾಡುತ್ತಿದ್ದಾರೆ. ಈ ಸತ್ಯಾಗ್ರಹದಲ್ಲಿ ನೀವೂ ಭಾಗಿಯಾಗಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿನಂತಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಂಭಿಸಿರುವ ’ಸ್ಪೀಕ್‌ಅಪ್ ಇಂಡಿಯಾ’ ಅಭಿಯಾನದ ಭಾಗವಾಗಿ ಪ್ರಾರಂಭಿಸಿರುವ, ’ಸ್ಪೀಕ್‌ಅಪ್ ಫಾರ್‌ ಕಿಸಾನ್ ಅಧಿಕಾರ್‌’(#SpeakUpForKisanAdhikar) ಎಂಬ ಹ್ಯಾಶ್‌ಟ್ಯಾಗ್‌‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ದೇಶದ ಅನ್ನದಾತರು ತಮ್ಮ ಹಕ್ಕುಗಳಿಗಾಗಿ ಅಹಂಕಾರಿ ಮೋದಿ ಸರ್ಕಾರದ ವಿರುದ್ಧ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ಭಾರತವೆ ರೈತರ ಮೇಲಿನ ದೌರ್ಜನ್ಯ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿರುದ್ಧ ಧ್ವನಿ ಎತ್ತುತ್ತಿದೆ. ನೀವೂ ಸೇರಿ ಈ ಸತ್ಯಾಗ್ರಹದ ಭಾಗವಾಗಿ” ಎಂದು ವಿನಂತಿಸಿದ್ದಾರೆ.

ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ರೈತರ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ರೈತರೊಂದಿಗೆ ಇದುವರೆಗೂ ಎಂಟು ಸುತ್ತಿನ ಮಾತುಕತೆ ನಡೆಸಿದೆ. ಆದರೆ ಎಲ್ಲವೂ ವಿಫಲವಾಗಿರುವುದರಿಂದ ಮತ್ತು ಹೋರಾಟವನ್ನು ತೀವ್ರಗೊಳಿಸಲು ರೈತರು ಜನವರಿ 26 ಕ್ಕೆ ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಲಿದ್ದೇವೆಂದು ಘೋಷಿಸಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಇಂದು ಒಂಬತ್ತನೇ ಸುತ್ತಿನ ಮಾತುಕತೆಗೆ ರೈತರನ್ನು ಆಹ್ವಾನಿಸಿದೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...