Homeಚಳವಳಿರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

- Advertisement -
- Advertisement -

ರೈತ ಹೋರಾಟ 50 ದಿನಗಳನ್ನು ದಾಟಿದರೂ ಪ್ರತಿಭಟನಾಕಾರರ ಹುಮ್ಮಸ್ಸು ಕೊಂಚವು ತಗ್ಗಿಲ್ಲ. ಸಿಂಘು, ಟಿಕ್ರಿ, ಶಹಜಾನ್‌ಪುರ್‌, ಗಾಝಿಪುರ್‌ ಮತ್ತು ಚಿಲ್ಲಾ ಗಡಿಗಳಲ್ಲಿ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೇವೆ ಮಾಡಲು ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಈಗಾಗಲೇ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಮಂದಿ ಕಟ್ಟಿಂಗ್‌, ಶೇವಿಂಗ್‌ ಮಾಡುವವರು ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಡುವೆಯೇ ಪಂಜಾಬ್‌ನ ಲೂದಿಯಾನದಿಂದ ಯುವಕರೊಬ್ಬರು ಆಗಮಿಸಿದ್ದು, ಪ್ರತಿಭಟನಾ ನಿರತ ರೈತರಿಗೆ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಹೌದು, ಸಿಖ್‌ ಜನಾಂಗದಲ್ಲಿ ಮೀಸೆ ಮತ್ತು ದಾಡಿಗೆ ವಿಶೇಷ ಸ್ಥಾನವಿದೆ. ಅವುಗಳನ್ನು ಆದಷ್ಟು ಸುಂದರವಾಗಿರಿಸಿಕೊಳ್ಳಲು ಈ ಸಮುದಾಯದವರು ಆಸಕ್ತಿ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೀಸೆ ಮತ್ತು ದಾಡಿಯನ್ನು ಸುಂದರಗೊಳಿಸುವ, ಅವುಗಳನ್ನು ಗುಂಗುರು (ರಿಂಕಲ್) ಮಾಡುವ ಅನೇಕ ಅಂಗಡಿಗಳು ಎಲ್ಲೆಡೆ ಇರುತ್ತವೆ. ಇಂತಹದ್ದೇ ಒಂದು ಅಂಗಡಿ ನಡೆಸುತ್ತಿದ್ದ ಲೂದಿಯಾನದ ಯುವಕ ಗುರ್‌ಜಾನ್‌ ಸಿಂಗ್‌, ಕಳೆದೆರಡು ದಿನಗಳಿಂದ ಸಿಂಘು ಗಡಿಯಲ್ಲಿ ಉಚಿತ ಕುಂಡಲ್‌ ಸೇವೆ ನೀಡುತ್ತಿದ್ದಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಹೇಗೆ ತಲೆ ಕೂದಲನ್ನು ಗುಂಗುರುಗೊಳಿಸಲಾಗುತ್ತದೆಯೋ ಅದೇ ವಿಧಾನವನ್ನು ದಾಡಿ ಮತ್ತು ಮೀಸೆಗೂ ಬಳಸಲಾಗುತ್ತದೆ. ಮೀಸೆಯನ್ನು ಮತ್ತಷ್ಟು ತಿರುಚಿ ಕೆಲವು ರಾಸಾಯನಿಕಗಳನ್ನು ಬಳಸಿ ಅದಕ್ಕೆ ಕ್ಲಿಪ್‌ ಮತ್ತು ಮರದ ಚಿಕ್ಕ ತುಂಡನ್ನು ಹಾಕಿ ಬಂಧಿಸಲಾಗುತ್ತದೆ. ಇದೇ ರೀತಿ ದಾಡಿಯ ಕೂದಲನ್ನು ಹಲವಾರು ವಿಶೇಷ ಕ್ಲಿಪ್‌ ಮತ್ತು ಹೇರ್‌ಪೀನ್‌ಗಳನ್ನು ಬಳಸಿ, ರಾಸಾಯನಿಕ ಹಾಕಿ ಗಂಟು ಕಟ್ಟಲಾಗುತ್ತದೆ. ಬಳಿಕ ಒಂದು ಗಂಟೆಯ ನಂತರ ಕ್ಲಿಪ್‌ಗಳನ್ನು ತೆಗೆದು ಮೀಸೆ ಮತ್ತು ದಾಡಿಯನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ರೀತಿಯಲ್ಲಿ ಒಂದು ಗಂಟೆ ಇರಿಸಿದ ಬಳಿಕ ಮೀಸೆ ಮತ್ತು ದಾಡಿಗೆ ಹೊಸ ರೂಪ ಬರುತ್ತದೆ. ಇದನ್ನು ಕುಂಡಲ್‌ ಎಂದು ಕರೆಯಲಾಗುತ್ತದೆ.

ಲೂದಿಯಾನದಲ್ಲಿ ಈ ಕೆಲಸಕ್ಕೆ ಒಬ್ಬರಿಗೆ 600 ರಿಂದ 500 ರೂಪಾಯಿ ಚಾರ್ಜ್‌ ಮಾಡುತ್ತಿದ್ದ ಗುರ್‌ಜಾನ್‌ ಸಿಂಗ್‌ ಇಲ್ಲಿ ಉಚಿತವಾಗಿ ಸೇವೆ ನೀಡುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವಕ ಗುರ್‌ಜಾನ್‌ ಸಿಂಗ್‌, ʼಊರಿನಲ್ಲಿ ನಾನು ಮೆನ್ಸ್‌ ಪಾರ್ಲರ್‌ ಇಟ್ಟುಕೊಂಡಿದ್ದೇನೆ. ಅಲ್ಲಿ ಪ್ರತಿ ದಿನ ಸಾವಿರಾರು ರೂಪಾಯಿ ಸಂಪಾದಿಸುತ್ತಿದೆ. ಆದರೆ, ಸರ್ಕಾರ ಜಾರಿಗೊಳಿಸಿದ ಈ ಕಾನೂನುಗಳಿಂದ ನನ್ನ ಜನರೆಲ್ಲಾ ಊರು ಬಿಟ್ಟು ಈ ಊರಿಗೆ ಬಂದು ಕುಳಿತಿದ್ದಾರೆ. ಹಾಗಾಗಿ ನನಗೆ ಊರಿನಲ್ಲಿ ಕೆಲಸವಿಲ್ಲದಂತಾಯಿತುʼ ಎಂದಿದ್ದಾರೆ.

ಜನರೆಲ್ಲ ಇಲ್ಲಿ ಬಂದ ಮೇಲೆ ನಾನು ಅಲ್ಲಿದ್ದು ಮಾಡುವುದೇನು..? ಅದೇ ಕೆಲಸ ಇಲ್ಲಿ ಮಾಡಿದರೇ ಆಗದೆ ಎನ್ನಿಸಿತು. ಅದಕ್ಕೆ ನಾನು ನನ್ನ ಅಂಗಡಿಯನ್ನು ಇಲ್ಲಿಗೆ ಬದಲಾಯಿಸಿದ್ದೇನೆ. ಹೊಟ್ಟೆ ಪಾಡಿಗೆ ಈ ಕೆಲಸ ಮಾಡುತ್ತಿದ್ದೆ. ಇಲ್ಲಿ ಹಣವಿಲ್ಲದಿದ್ದರೂ ಹೊಟ್ಟೆಗೆ ಊಟ ದೊರೆಯುತ್ತಿದೆ. ಹಾಗಾಗಿ ನನ್ನಿಂದ ಆಗುವ ಈ ಸೇವೆಯನ್ನು ನಾನು ಮಾಡುತ್ತಿದ್ದೇನೆ. ಇನ್ನೆನಿದ್ದರೂ ನನ್ನವರು ನನ್ನ ಊರಿಗೆ ಬರುವವರೆಗೆ ನಾನು ಇಲ್ಲಿಯೇ ಇರುತ್ತೇನೆ. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಸರ್ಕಾರ ನಮ್ಮ ಮಾತು ಕೇಳಲೇಬೇಕುʼ ಎಂದು ಹೇಳುತ್ತಾರೆ ಗುರ್‌ಜಾನ್‌ ಸಿಂಗ್.

ಹೋರಾಟಗಳು ದಿನೇ-ದಿನೇ ತಮ್ಮ ಹುಮ್ಮಸ್ಸು ಕಳೆದುಕೊಂಡು ತಣ್ಣಗಾಗುವುದನ್ನು ನಾವು ನೋಡಿದ್ದೇವೆ. ಆದರೆ, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಈ ರೈತ ಹೋರಾಟ ಹೊಸತನಕ್ಕೆ ಸಾಕ್ಷಿಯಾಗಿದೆ. ದಿನೇ ದಿನೇ ಇದು ರಂಗೇರುತ್ತಿದೆ.


ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...