Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...