Homeಕರ್ನಾಟಕಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

ಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

- Advertisement -
- Advertisement -

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗಿನಿಂದ ಬಿಜೆಪಿಯ ಒಳಗೆ ಬಿರುಕು ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಸಚಿವಾಕಾಂಕ್ಷಿಗಳೆಲ್ಲರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ಪ್ರವಾಸದಲ್ಲಿರುವ ಗೃಹ ಮಂತ್ರಿ ಅಮಿತ್ ಶಾ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. “ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು” ಎಂದು ಎಚ್ಚರಿಸಿದ್ದಾರೆ.

ಶನಿವಾರ ಸಂಜೆ ನಡೆದ ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಪಕ್ಷದ ಮುಖಂಡರಿಗೆ ಸಂದೇಶ ನೀಡಿದ ಅಮಿತ್ ಶಾ, “ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಈ ಸಭೆಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಉಸ್ತುವಾರಿಯಾದ ಅರುಣ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಕೇಂದ್ರ ಸಚಿವ ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸಚಿವರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಮತ್ತು ಅರವಿಂದ್ ಲಿಂಬಾವಳಿ ಉಪಸ್ಥಿತರಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ನಾಯಕತ್ವವನ್ನು ಪ್ರಶ್ನಿಸುತ್ತಿರುವವರ ಹೆಸರನ್ನು ಉಲ್ಲೇಖಿಸದಿದ್ದರೂ, ಯಡಿಯೂರಪ್ಪನವರ ವಿರುದ್ಧ ವೈಯಕ್ತಿಕವಾಗಿ ಆರೋಪಗಳನ್ನು ಮಾಡುತ್ತಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿರುವವರನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಶಾಸಕ ಯತ್ನಾಳ್, ಶಾಸಕ ರೇಣುಕಾಚಾರ್ಯ ಸೇರಿದಂತೆ ಹತ್ತಾರು ನಾಯಕರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಾಬಿ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಆರೋಪಿಸಿದ್ದರು. ಸಿ.ಡಿ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮತ್ತೆ ಕೆಲವರು ಕಿಡಿ ಕಾರಿದ್ದರು.

ಇವುಗಳನ್ನು ಗಮನಿಸಿದ ಯಡಿಯೂರಪ್ಪ, ನಿಮಗೆ ಅಸಮಾಧಾನವಿದ್ದರೆ ದೆಹಲಿಗೆ ಹೋಗಿ ದೂರು ನೀಡಿ ಎಂದು ಸಚಿವಾಕಾಂಕ್ಷಿಗಳಿಗೆ ಖಡಕ್ ಆಗಿ ಹೇಳಿದ್ದರು. ಈ ಬೆನ್ನಲ್ಲೇ ಅಮಿತ್ ಶಾ ನೀಡಿರುವ ಈ ಹೇಳಿಕೆ ಸಚಿವಾಕಾಂಕ್ಷಿಗಳಿಗೆ ಆಘಾತ ನೀಡಿದಂತಾಗಿದೆ.  ಈಗ ಇವರ ಮುಂದಿನ ನಡೆ ಏನೆಂಬುದನ್ನು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಜೆಪಿಗೆ ಸೇರಿದ ಕೆಲವರು ಬಾಯಿ ಬಡ್ಕೊತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...