Homeಮುಖಪುಟಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಮಮತಾಗೆ ಮತ್ತೊಂದು ಆಘಾತ!

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಮಮತಾಗೆ ಮತ್ತೊಂದು ಆಘಾತ!

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಯ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಪಕ್ಷಗಳು ಈಗಾಗಲೆ ತಯಾರಿ ಆರಂಭಿಸಿವೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರದ ಪ್ರಾದೇಶಿಕ ಪಕ್ಷ ಶಿವಸೇನೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಹಾಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ ಎದುರಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವತ್, “ಬಹುನಿರೀಕ್ಷಿತ ಅಪ್‌ಡೇಟ್ ಇಲ್ಲಿದೆ. ಪಕ್ಷದ ಮುಖ್ಯಸ್ಥರಾದ ಉದ್ಧವ್ ಠಾಕ್ರೆಯವರೊಂದಿಗೆ ಚರ್ಚಿಸಿದ ನಂತರ, ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭಾಗವಹಿಸುವುದಾಗಿ ನಿರ್ಧರಿಸಲಾಗಿದೆ. ನಾವು ಅತಿ ಶೀಘ್ರದಲ್ಲೇ ಕಲ್ಕತ್ತಾವನ್ನು ತಲುಪಲಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭಾಗವಹಿಸುತ್ತೇವೆ ಎಂದು ಹಲವು ಪ್ರಮುಖ ಪಕ್ಷಗಳು ಇದುವರೆಗೂ ಘೋಷಿಸಿವೆ. ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಮತ್ತು ಅಸದುದ್ದೀನ್ ಓವೈಸಿ ಅವರ ಪಕ್ಷವೂ ಸಹ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿವೆ. ಇನ್ನು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವೂ ಸಹ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಮತ್ತೊಂದು ಕಡೆ ಬಿಜೆಪಿ, ಈ ಬಾರಿ ಅಧಿಕಾರ ಹಿಡಿಯಲೇ ಬೇಕು ಎಂದು ಹವಣಿಸುತ್ತಿದೆ. ಇನ್ನು ಕಾಂಗ್ರೆಸ್ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಈ ಎಲ್ಲಾ ಪಕ್ಷಗಳೂ ರಾಜ್ಯದ ಚುನಾವಣೆಯಲ್ಲಿ ಭಾಗವಹಿಸುವುದರಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಮತಗಳು ವಿಭಜನೆಯಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಾಲಿಗೆ ಈಗ ಶಿವಸೇನೆಯೂ ಸೇರಿಕೊಂಡಿರುವುದರಿಂದ ಮಮತಾಗೆ ಮತ್ತೊಂದು ಆಘಾತ ಎದುರಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ ದೇಶದಲ್ಲಿ ನಡೆಯುತ್ತಿರುವ ಎರಡನೇ ಅತಿದೊಡ್ಡ ಚುನಾವಣೆ ಇದಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಮತ್ತು ತೃಣಮೂಲ ಕಾಂಗ್ರೆಸ್‌ಗೆ ನೇರಾನೇರಾ ತೀವ್ರ ಪೈಪೋಟಿ ಇರಲಿದೆ. ಹಾಗಾಗಿ ಪಶ್ಚಿಮ ಬಂಗಾಳ ಯಾರ ತೆಕ್ಕೆಗೆ ಹೋಗಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನೂ ಓದಿ: ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...