Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...