Homeಮುಖಪುಟನೀವು ರೈತರನ್ನು ನೋಡಿ, ಕ್ರಿಕೆಟನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ: ನರೇಂದ್ರ ಮೋದಿಗೆ ಛೀಮಾರಿ

ನೀವು ರೈತರನ್ನು ನೋಡಿ, ಕ್ರಿಕೆಟನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ: ನರೇಂದ್ರ ಮೋದಿಗೆ ಛೀಮಾರಿ

- Advertisement -
- Advertisement -

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿ, 2-1 ಅಂತರದಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು. ಈ ಐತಿಹಾಸಿಕ ಗೆಲುವಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ದ ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಸಂತೋಷಗೊಂಡಿದ್ದೇವೆ. ಅವರ ಗಮನಾರ್ಹ ಶಕ್ತಿ ಮತ್ತು ಉತ್ಸಾಹವು ಪಂದ್ಯದ ಉದ್ದಕ್ಕೂ ಗೋಚರಿಸಿತು. ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಟ್ವಿಟ್ಟರ್‌ನಲ್ಲಿ ಸಕ್ರಿಯವಾಗಿರುವ ಹಲವಾರು ಜನರು ಮೋದಿಯ ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿ, ರೈತ ಹೋರಾಟ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾ ಕಟ್ಟಿರುವ ಹಳ್ಳಿಯ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ.

ಪ್ರಶಾಂತ್ ಪಾಲ್ ಅವರು, “ಅಣ್ಣಾ ನೀವು ಮೊದಲು ರೈತರನ್ನು ನೋಡಿ, ಪಂದ್ಯಾಟವನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ” ಎಂದು ಆ‌ಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್‌‌ಕುಮಾರ್‌ ಮೀನಾ ಅವರು, ” ಚೀನಾ ಅರುಣಾಚಲ ಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸಿದೆ. ನಮ್ಮ ಮಾತೃಭೂಮಿಯನ್ನು ರಕ್ಷಣೆ ಮಾಡಲು ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎಂದು ವಿವರಿಸಬಹುದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ಟಿಆರ್‌‌ಎಸ್ ಥೋಪು ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಅರುಣಾಚಲ್ ಪ್ರದೇಶದಲ್ಲಿ ಆಗುತ್ತಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಭಿವೃದ್ದಿ ಕೆಲಸಗಳ ಬಗ್ಗೆ ಕೂಡಾ ಖುಷಿ ಪಡಿ” ಎಂದು ಹೇಳಿದ್ದಾರೆ.

ರವಿ ಕುಮಾರ್‌ ಅವರು, ಕೇವಲ ಕ್ರಿಕೆಟ್ ನೋಡುವುದಲ್ಲ, ಇದನ್ನು ಕೂಡಾ ನೋಡಿ ಎಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಕಟ್ಟುತ್ತಿರುವ ಮನೆಗಳ ಫೋಟೋ ಹಾಕಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ತಮಿಳನ್ ಸತ್ಯಾ ಟ್ವಿಟ್ಟರ್‌ ಹ್ಯಾಂಡಲ್, “4.5 ಕಿಲೋ ಮೀಟರ್‌ ಭಾರತದ ಭೂಪ್ರದೇಶದ ಒಳಗಡೆ ಚೀನಾ ಮನೆಗಳನ್ನು ಕಟ್ಟಿದೆ. ಕಳೆದ 60 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎರಡು ದೊಡ್ಡ ಸಮಸ್ಯೆಗಳ ಬಗ್ಗೆ ಯಾವುದೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಕ್ರಿಕೆಟ್‌ಗೆ ಅಭಿನಂದಿಸುತ್ತಾರೆ. ನೀವು ಭಾರತದ ಪ್ರಧಾನಿಯಾಗಲು ಅರ್ಹತೆ ಇಲ್ಲದವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...