Homeಮುಖಪುಟಇಂದು ಅಸ್ಸಾಂಗೆ ಪ್ರಧಾನಿ: ಸಿಎಎ, ಎನ್‌ಆರ್‌ಸಿ ವಿರೋಧಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

ಇಂದು ಅಸ್ಸಾಂಗೆ ಪ್ರಧಾನಿ: ಸಿಎಎ, ಎನ್‌ಆರ್‌ಸಿ ವಿರೋಧಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಸ್ಸಾಂ ಭೇಟಿಗೂ ಮುನ್ನ, ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ವಿರೋಧಿಸಿ ಶುಕ್ರವಾರ ತೇಜ್‌ಪುರದಲ್ಲಿ ರ್ಯಾಲಿ ನಡೆಸಿದ ಆಲ್ ಅಸ್ಸಾಂ ವಿದ್ಯಾರ್ಥಿ ಸಂಘದ (ಎಎಎಸ್‌ಯು) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಅಸ್ಸಾಂನ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದಿನವಿಡೀ ನಡೆದ ಪ್ರತಿಭಟನೆಯಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ. ಹಾಗಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಶುಕ್ರವಾರ ಹಲವಾರು ಎಎಎಸ್‌ಯು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಅಸ್ಸಾಂನಲ್ಲಿ ಈಗಾಗಲೇ ಎನ್‌ಆರ್‌ಸಿ ಜಾರಿಗೊಳಿಸಲಾಗಿದೆ. ಈ ಕಾನೂನು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುತ್ತದೆ ಮತ್ತು ಭಾರತೀಯ ಸಂವಿಧಾನಕ್ಕೆ ವಿರುದ್ಧವಿದೆ ಎಂದು ಹಲವಾರು ಜನರು ವಿರೋಧಿಸಿದ್ದಾರೆ. ಹಾಗೆಯೇ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಿಂದ 2015ಕ್ಕೂ ಮೊದಲು ಅಕ್ರಮ ವಲಸೆ ಬಂದಿರುವ ಲಕ್ಷಾಂತರ ಬಾಂಗ್ಲಾದೇಶಿಯರು ಪೌರತ್ವ ಪಡೆಯಲಿದ್ದು ಇದು ಅಸ್ಸಾಂ ಅಸ್ಮಿತೆಯ ಮೇಲಿನ ದಾಳಿಯೆಂದು ಹಲವಾರು ಜನ ಭಾವಿಸಿದ್ದು ಈ ಕಾನೂನುಗಳ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ತೇಜ್‌ಪುರದಲ್ಲಿ ಸಾವಿರಾರು ಎಎಎಸ್‌ಯು ಕಾರ್ಯಕರ್ತರು ರ್ಯಾಲಿ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲಿಂದ ಪೊಲೀಸ್ ದೌರ್ಜನ್ಯ ಹಿಂಸಾತ್ಮಕವಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪೊಲೀಸ್ ದೌರ್ಜನ್ಯವನ್ನು ಖಂಡಿಸಿರುವ ವಿದ್ಯಾರ್ಥಿಗಳು ಶನಿವಾರ ಸೋನಿತ್ಪುರ ಜಿಲ್ಲೆ ಬಂದ್‌ಗೆ ಕರೆ ನೀಡಿದ್ದಾರೆ. ಶನಿವಾರ-ಭಾನುವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂಗೆ ಭೇಟಿ ನೀಡುವುದನ್ನು ವಿರೋಧಿಸಿ ಸಿಎಎ ವಿರುದ್ಧ ಮೂರು ದಿನಗಳ ಪ್ರತಿಭಟನೆಗೆ ವಿದ್ಯಾರ್ಥಿ ಸಂಘಗಳು ಕರೆ ನೀಡಿವೆ.

“ನಮ್ಮ ಶಾಂತಿಯುತ, ಪ್ರಜಾಪ್ರಭುತ್ವ ಪರವಾದ ಪಂಜಿನ ಮೆರವಣಿಗೆ ರ್ಯಾಲಿಯನ್ನು ನಿಲ್ಲಿಸುವಂತೆ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಬಿಜೆಪಿ ಸರ್ಕಾರವು ಬಲಪ್ರಯೋಗದ ಮೂಲಕ ನಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಂಕ್ ನಾಥ್ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂನಲ್ಲಿರುವ ಸಮಯದಲ್ಲಿ ಸಿಎಎ ವಿರುದ್ಧ ನಮ್ಮ ಆಂದೋಲನವನ್ನು ತೀವ್ರಗೊಳಿಸುತ್ತೇವೆ. ಕೇಂದ್ರ ಸರ್ಕಾರ ಸಿಎಎ ರದ್ದುಗೊಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...

ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು

ಮೀರತ್‌ನಲ್ಲಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಮಹಿಳೆಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, "ಪೊಲೀಸರು ಮತ್ತು ಬಿಜೆಪಿ ಮುಖಂಡರು ತಮ್ಮನ್ನು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ, ಪ್ರಮುಖ...

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ...

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ...

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...