Homeಮುಖಪುಟಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಕರ್ನಾಟಕದ ನಾಲ್ಕೂ ದಿಕ್ಕುಗಳಿಂದ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದು, ಸುಮಾರು 5000 ವಾಹನಗಳು ಬೆಂಗಳೂರಿನಲ್ಲಿ ಪರೇಡ್ ನಡೆಸಲಿವೆ.

- Advertisement -
- Advertisement -

ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ, ಅದೇ ಜಾಗದಲ್ಲಿ ರಸ್ತೆ ತಡೆ ನಡೆಸುವುದಲ್ಲದೇ ಎಲ್ಲಾ ಹೆದ್ದಾರಿಗಳನ್ನು ಬಂದ್ ಮಾಡಿ ರಾಜ್ಯಾದ್ಯಂತ ಸಂಚಾರ ಅಸ್ತವ್ಯಸ್ತ ಮಾಡುತ್ತೇವೆ ಎಂದು ಕ.ರಾ.ರೈ.ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನವರಿ 26 ರಂದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದೇವೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಟ್ರ್ಯಾಕ್ಟರ್‌ಗಳು ಬೆಂಗಳೂರಿನತ್ತ ಹೊರಟಿವೆ. ಆದರೆ ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆಯುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಪೊಲೀಸರು ಗೌರವಯುತವಾಗಿ ಟ್ರ್ಯಾಕ್ಟರ್‌ಗಳು ಬೆಂಗಳೂರಿಗೆ ಬರಲು ಅನುಮತಿ ಕೊಡಬೇಕು. ಇಲ್ಲಿದಿದ್ದರೆ ಸಂಚಾರ ಅಸ್ತವ್ಯಸ್ತವಾದರೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿ ನಮ್ಮ ಹೋರಾಟವನ್ನು ಹತ್ತಿಕ್ಕಲು ನೋಡುತ್ತಿದೆ. ಇದು ಸರಿಯಾದುದ್ದಲ್ಲ. ಲಕ್ಷಾಂತರ ಟ್ರ್ಯಾಕ್ಟರ್‌ಗಳು ಸೇರುವ ದೆಹಲಿ ಹೋರಾಟಕ್ಕೆ ಪೊಲೀಸರು ಅನುಮತಿ ನೀಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಬೇಕು. ಒಂದು ವೇಳೆ ಜನವರಿ 26 ರಂದು ನಮ್ಮ ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯದ ಎಲ್ಲಾ ಹೆದ್ದಾರಿಗಳನ್ನು ಅನಿರ್ದಿಷ್ಟಾವಧಿ ಬಂದ್ ಮಾಡಿ ಸಂಚಾರ ಅಸ್ತವ್ಯಸ್ತ ಮಾಡಬೇಕಾಗುತ್ತದೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು ಎಂದು ನಾಗೇಂದ್ರರವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್ ಅಧಿಕಾರಿಗಳಲ್ಲಿ ಒಂದು ವಿನಂತಿ ಮಾಡುತ್ತೇವೆ. ನೀವು ಟ್ರ್ಯಾಕ್ಟರ್‌ಗಳನ್ನು ತಡೆದು ನಮ್ಮ 3 ಗಂಟೆಯ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಬೇಡಿ. ಒಂದು ವೇಳೆ ಹಾಗೆ ಮಾಡಿದರೆ ನಾವು ರಾಜ್ಯಾದ್ಯಂತ ದಿನವಿಡೀ ರಸ್ತೆಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಾವು ಬಾಂಬು – ಬಂದೂಕು ತೆಗೆದುಕೊಂಡು ಬೆಂಗಳೂರಿಗೆ ಬರುತ್ತಿಲ್ಲ. ಬದಲಿಗೆ ಶಾಂತಿಯುತವಾಗಿ ಹೋರಾಟ ಮಾಡಲು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೂರು ಕರಾಳ ಕಾನೂನುಗಳು ರದ್ದಾಗಬೇಕೆಂಬುದು ನಮ್ಮ ಒತ್ತಾಯ ಎಂದು ನಾಗೇಂದ್ರರವರು ಹೇಳಿದ್ದಾರೆ.

ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಲ್ಕೂ ದಿಕ್ಕುಗಳಿಂದ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದು, ಸುಮಾರು 5000 ವಾಹನಗಳು ಬೆಂಗಳೂರಿನಲ್ಲಿ ಪರೇಡ್ ನಡೆಸಲಿವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...