HomeಮುಖಪುಟTRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

- Advertisement -
- Advertisement -

ಟಿಆರ್‌ಪಿ ತಿರುಚುವುದಕ್ಕಾಗಿ ಬಾರ್ಕ್‌‌ನ ಮಾಜಿ ಮುಖ್ಯಸ್ಥನಿಗೆ 12 ಸಾವಿರ ಡಾಲರ್‌ ಮತ್ತು 40 ಲಕ್ಷ ರೂ. ಗಳನ್ನು ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿಯು ನೀಡಿದ್ದಾರೆಂದು ಇತ್ತೀಚೆಗೆ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿತ್ತು. ಈ ವರದಿಯನ್ನು ವಿರೋಧಿಸಿರುವ ರಿಪಬ್ಲಿಕ್ ಟಿವಿ, ಮಾಧ್ಯಮ ವಿಚಾರಣೆ ನಡೆಸುತ್ತಿದ್ದೀರಿ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಪತ್ರಿಕೆಗೆ ಕಾನೂನು ನೋಟಿಸ್ ರವಾನಿಸಿದೆ.

ಕಾನೂನು ನೋಟಿಸ್‌ನಲ್ಲಿ, “ಲಂಚ ನೀಡಿದ ಆರೋಪವು ಟಿಆರ್‌ಪಿ ಹಗರಣದಲ್ಲಿ ಮುಂಬೈ ಪೊಲೀಸರು ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಆದರೆ ಇದಕ್ಕೆ ಸ್ಪಷ್ಟ ಪುರಾವೆಗಳಿಲ್ಲ. ಹೀಗಿದ್ದರೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೋದ್ಯಮ ನೀತಿಗಳನ್ನು ಉಲ್ಲಂಘಿಸಿ ನ್ಯಾಯಾಧೀಶರಂತೆ, ತೀರ್ಪುಗಾರರಂತೆ, ಮರಣದಂಡನೆ ನೀಡುವವರಂತೆ ವರ್ತಿಸಿದ್ದೀರಿ. ಲೇಖನದ ಶೀರ್ಷಿಕೆ ದುರುದ್ದೇಶಪೂರಿತ ಮತ್ತು ಕುಚೇಷ್ಟೆಯದ್ದಾಗಿದೆ’’ ಎಂದು ಹೇಳಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

“ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾರಿಂದ ಮುಂಬೈ ಪೊಲೀಸರು ಒತ್ತಾಯಪೂರ್ವಕವಾಗಿ ಮತ್ತು ಬಲವಂತದಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಈ ಹೇಳಿಕೆಯನ್ನು ಪಾರ್ಥೋ ದಾಸ್‌ಗುಪ್ತ ಕೂಡಾ ನಿರಾಕರಿಸಿದ್ದಾರೆ. ಆದರೆ, ಹೇಳಿಕೆಯನ್ನು ಪುರಾವೆಯಾಗಿ ಪರಿಗಣಿಸಲಾಗದು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ಉಲ್ಲೇಖಿಸಿಲ್ಲ” ಎಂದು ನೋಟಿಸ್ ಹೇಳಿದೆ.

“ರಿಪಬ್ಲಿಕ್ ಟಿವಿಯ ಘನತೆಗೆ ಕುಂದುಂಟು ಮಾಡಲು ಪತ್ರಿಕೆ ಪ್ರಯತ್ನಿಸುತ್ತಿದೆ. ಪತ್ರಿಕೆಯಲ್ಲಿ ಪ್ರಕಟವಾದ ವರದಿಯು ಪತ್ರಿಕೆ ನಡೆಸುತ್ತಿರುವ ಅಪಪ್ರಚಾರ ಅಭಿಯಾನದ ಭಾಗವಾಗಿದ್ದು ರಿಪಬ್ಲಿಕ್ ಟಿವಿ ಮತ್ತು ರಿಪಬ್ಲಿಕ್ ನೆಟ್‌‌ವರ್ಕ್‌‌ನ ಖ್ಯಾತಿಯನ್ನು ಸರಿಪಡಿಸಲಾರದಷ್ಟು ನಾಶಮಾಡುವ ಪ್ರಯತ್ನ ಹೊಂದಿದೆ” ಎಂದು ಉಲ್ಲೇಖಿಸಲಾಗಿದೆ.

“ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ 24 ಗಂಟೆಯೊಳಗೆ ಬೇಷರತ್ ಕ್ಷಮೆ ಯಾಚಿಸಬೇಕು ಮತ್ತು ರಿಪಬ್ಲಿಕ್ ಟಿವಿ ಚಾನೆಲ್‌ನ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ವರದಿ ಪ್ರಕಟಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೆವೆ” ಎಂದು ಕಾನೂನು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಸುಶಾಂತ್‌ ಸಿಂಗ್ ರಾಜಪೂತ್ ಸಾವಿನ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಯನ್ನು ರಿಪಬ್ಲಿಕ್ ಟಿವಿಯು ಮಾಧ್ಯಮ ವಿಚಾರಣೆ ನಡೆಸುತ್ತಿದೆ ಎಂದು ಹಲವಾರು ಜನರು ಆರೋಪಿಸಿದ್ದರು.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...