Homeಮುಖಪುಟಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ನಡೆದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ನಂತರ ಸಂಯುಕ್ತ್ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ರ್ಯಾಲಿಯಲ್ಲಿ ನಡೆದ ಅಹಿತಕರ ಘಟನೆಗೆ ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪಿತೂರಿಯೇ ಕಾರಣ” ಎಂದು ಆರೋಪಿಸಿದೆ. ಈ ಸಭೆಯಲ್ಲಿ ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಜಗ್ಜೀತ್ ಸಿಂಗ್ ದಲ್ಲೇವಾಲ್, ದರ್ಶನ್ ಪಾಲ್ ಸೇರಿ ಎಲ್ಲಾ ರೈತ ಮುಖಂಡರು ಉಪಸ್ಥಿತರಿದ್ದರು.

“ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ. ಹೀಗೆ ಸಂಚಿನಲ್ಲಿ ಪಾಲ್ಗೊಂಡ ಸಂಘಟನೆಗಳು ಜಂಟಿಯಾಗಿ ಹೋರಾಟವನ್ನು ಕೈಗೊಂಡ ಸಂಸ್ಥೆಗಳ ಭಾಗವಾಗಿರಲಿಲ್ಲ” ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

“ಜನವರಿ 26 ರಂದು ರೈತ ಸಂಘಟನೆಗಳು ಕಿಸಾನ್ ಪೆರೇಡ್ ಕಾರ್ಯಕ್ರಮವನ್ನು ಘೋಷಿಸಿದಾಗ, ಸಮಾಜ ವಿರೋಧಿ ವ್ಯಕ್ತಿಗಳಾದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಗಳು ರೈತರ ಆಂದೋಲನವನ್ನು ಹಾಳು ಮಾಡಲು ಪ್ರಯತ್ನಿಸಿದರು” ಎಂದು ಆರೋಪಿಸಲಾಗಿದೆ.

“ಈ ಪಿತೂರಿಯ ಭಾಗವಾಗಿ, ಕಿಸಾನ್ ಮಜ್ದೂರ್ ಸಂಘರ್ಷ್‌ ಮತ್ತು ಇತರ ವ್ಯಕ್ತಿಗಳು ತಾವು ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತೇವೆ ಮತ್ತು ಕೆಂಪು ಕೋಟೆಯಲ್ಲಿ ಧ್ವಜವನ್ನು ಹಾರಿಸುತ್ತೇವೆ ಎಂದು ಘೋಷಿಸಿದರು. ನಂತರ ಹೋರಾಟ ನಡೆಸುತ್ತಿರುವ ಇತರೆ ಸಂಘಟನೆಗಳ ನಿಗದಿತ ಮೆರವಣಿಗೆಗೂ ಎರಡು ಗಂಟೆಗಳ ಮೊದಲೇ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯು ರಿಂಗ್ ರಸ್ತೆಯಲ್ಲಿ ಮೆರವಣಿಗೆ ಪ್ರಾರಂಭಿಸಿತು. ಇದು ಶಾಂತಿಯುತ ಮತ್ತು ಪ್ರಬಲವಾದ ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಪಿತೂರಿ. ಹಾಗಾಗಿ
ಈ ಘಟನೆಯನ್ನು ಸಂಯುಕ್ತ್ ಕಿಸಾನ್ ಮೋರ್ಚಾದ ಎಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಈ ಆಂದೋಲನವನ್ನು ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಶಾಂತಿಯುತ ರೈತರ ಹೋರಾಟಕ್ಕೆ ಹಾನಿ ಮಾಡಲು ಪ್ರಯತ್ನಿಸಿದ ಸರ್ಕಾರ ಮತ್ತು ಅದರ ಆಡಳಿತವನ್ನು, ಮೇಲೆ ಉಲ್ಲೇಖಿಸಿದ ಸಂಘಟನೆ ಮತ್ತು ಸಮಾಜ ವಿರೋಧಿ ವ್ಯಕ್ತಿಗಳನ್ನು ರೈತ ಒಕ್ಕೂಟವು ತೀವ್ರವಾಗಿ ಖಂಡಿಸಿವೆ.

“ಈ ಹೋರಾಟವನ್ನು ಒಡೆಯಲು ಯತ್ನಿಸುತ್ತಿರುವ ಸರ್ಕಾರ ಮತ್ತು ಇತರ ಶಕ್ತಿಗಳನ್ನು ಈ ಶಾಂತಿಯುತ ಚಳವಳಿಯಲ್ಲಿ ಸೇರಲು ಅವಕಾಶ ನೀಡದಿರಲು ಸಂಘಟನೆಗಳು ನಿರ್ಧರಿಸಿದ್ದು, ನಿನ್ನೆ ನಡೆದ ಘಟನೆಗಳು ರೈತ ವಿರೋಧಿ ಪಡೆಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಿ ಪ್ರತ್ಯೇಕಿಸಿವೆ” ಎಂದು ಹೇಳಲಾಗಿದೆ.

ಹಾಗಾಗಿ ಇಂತಹ ಪಿತೂರಿಗಳಿಗೆ ಕಿವಿಗೊಡದೇ, ಪ್ರತಿಭಟನಾ ಸ್ಥಳಗಳಲ್ಲಿಯೇ ಉಳಿದು ಶಾಂತಿಯುತ ಹೋರಾಟವನ್ನು ಮುಂದುವರೆಸಬೇಕೆಂದು ಹೋರಾಟಗಾರರು ರೈತರಿಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...