Homeಮುಖಪುಟ'ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು' - ಮತ್ತೋರ್ವ ಶಾಸಕ ರಾಜೀನಾಮೆ

‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ ರಾಜೀನಾಮೆ

- Advertisement -
- Advertisement -

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್‌ಎಲ್‌ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ರಾಜೀನಾಮೆ ನೀಡಿದ್ದು, ರೈತರನ್ನು ಬೆಂಬಲಿಸಿ ರಾಜೀನಾಮೆ ನೀಡುತ್ತಿರುವವರ ಸಾಲಿಗೆ ಇವರು ಹೊಸ ಸೇರ್ಪಡೆ.

ಈ ಕುರಿತು ಸ್ವತಃ ಶಾಸಕರೆ ಟ್ವೀಟ್ ಮಾಡಿದ್ದು, “ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ…

ಇದನ್ನೂ ಓದಿ: ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಚೌಟಾಲ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ ಎಂದು ಹರಿಯಾಣ ವಿಧಾನಸಭೆ ಸ್ಪೀಕರ್ ಜ್ಞಾನ್‌ಚಂದ್ ಗುಪ್ತಾ ತಿಳಿಸಿದ್ದಾರೆ.

ರೈತರ ಬೇಡಿಕೆಗಳು ಈಡೇರದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಚೌಟಾಲ ಹೇಳಿದ್ದಾರೆ.

ಇವರು ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಪುತ್ರರಾಗಿದ್ದು, 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಐಎನ್‌ಎಲ್‌ಡಿ ಪಕ್ಷದಿಂದ ಆಯ್ಕೆಯಾದ ಏಕೈಕ ಶಾಸಕರಾಗಿದ್ದಾರೆ.


ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...