Homeಕರ್ನಾಟಕಶಿವಮೊಗ್ಗ ಕಲ್ಲುಗಣಿಯಲ್ಲಿನ ಸ್ಫೋಟಕ್ಕೆ ಯಡಿಯೂರಪ್ಪ, ಈಶ್ವರಪ್ಪನವರೇ ಕಾರಣ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗ ಕಲ್ಲುಗಣಿಯಲ್ಲಿನ ಸ್ಫೋಟಕ್ಕೆ ಯಡಿಯೂರಪ್ಪ, ಈಶ್ವರಪ್ಪನವರೇ ಕಾರಣ: ಸಿದ್ದರಾಮಯ್ಯ ಆರೋಪ

"ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳ ಹಿಂದೆ ಯಾರಿದ್ದಾರೆ ಎಂಬ ಸತ್ಯಸಂಗತಿ ಜಗತ್ತಿಗೆ ಗೊತ್ತಾಗಬೇಕಾದರೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತ್ರತ್ವದಲ್ಲಿ ತನಿಖೆಯಾಗಬೇಕು"

- Advertisement -
- Advertisement -

ಇತ್ತೀಚೆಗೆ ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ “ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಸ್ತುವಾರಿ ಸಚಿವರಾದ ಕೆ.ಎಸ್ ಈಶ್ವರಪ್ಪನವರೇ ಹೊಣೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹುಣಸೋಡಿನಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಪರಿಹಾರ ನೀಡಲು ಕಾನೂನಾತ್ಮಕ ಅಡ್ಡಿಗಳಿದ್ದರೂ ಮಾನವೀಯತೆ ನೆಲೆಯಲ್ಲಿ ಸ್ಪಂದಿಸಬೇಕು ಎಂದು ತಿಳಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

“ಹುಣಸೋಡು ದುರಂತದ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹೊರಬೇಕು. ಇವರ ಬೆಂಬಲದ ಕಾರಣದಿಂದಾಗಿಯೇ ಅಕ್ರಮ ಗಣಿಕಾರಿಕೆ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳದೆ ನಿಷ್ಕ್ರಿಯರಾಗಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ…

“ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳ ಹಿಂದೆ ಯಾರಿದ್ದಾರೆ ಎಂಬ ಸತ್ಯಸಂಗತಿ ಜಗತ್ತಿಗೆ ಗೊತ್ತಾಗಬೇಕಾದರೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತ್ರತ್ವದಲ್ಲಿ ತನಿಖೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹುಣಸೋಡಿನಲ್ಲಿ 50ಕ್ಕೂ ಹೆಚ್ಚು ಡೈನಾಮೈಟ್‌ಗಳು ಸ್ಪೋಟಗೊಂಡು, ಇದರಲ್ಲಿ ಸಾವನ್ನಪ್ಪಿದ ಸುಮಾರು 8 ಕ್ಕೂ ಹೆಚ್ಚು ಕಾರ್ಮಿಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ್ದರು. ಜೊತೆಗೆ ಈ ಘಟನೆಯ ಕುರಿತು ಉನ್ನತ ತನಿಖೆಗೆ ಆದೇಶಿಸಿದ್ದಾರೆ.

ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜೆಲಿಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರಗೊಂಡಿದ್ದು, ಲಾರಿ ಚಾಲಕ ಮತ್ತು ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...