Homeಮುಖಪುಟಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

- Advertisement -
- Advertisement -

ಗಣರಾಜ್ಯೋತ್ಸವದ ದಿನದಂದು ನಡೆದ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ಮಂಗಳವಾರ ದೆಹಲಿಯ ರೈತ ಗಣರಾಜ್ಯೋತ್ಸವದಲ್ಲಿ ನಡೆದ ಗದ್ದಲದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಮಾರು 200 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಸರಿಯಾದ ಪರಿಶೀಲನೆ ನಡೆಸಿದ ನಂತರ ಬಂಧನಗಳನ್ನು ಮಾಡುತ್ತಿದ್ದೇವೆ ಮತ್ತು ಈವರೆಗೆ 22 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತ ಹೋರಾಟದ ಮುಂಚೂಣಿಯಲ್ಲಿರುವ, ದರ್ಶನ್ ಪಾಲ್, ರಾಜೀಂದರ್‌ ಸಿಂಗ್, ಬಲ್‌‌ಬೀರ್‌ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್‌ಗಿಲ್, ಜೋಗೀಂದರ್‌ ಸಿಂಗ್‌, ರಾಕೇಶ್ ಟಿಕಾಯತ್‌, ಯೋಗೇಂದ್ರ ಯಾದವ್ ಸೇರಿದಂತೆ ಹತ್ತು ರೈತ ಮುಖಂಡರ ಹೆಸರನ್ನು ನಮೂದಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೆಂಪು ಕೋಟೆಯಲ್ಲಿ ಧ್ವಜ ಹಾರಿಸುವಾಗ ಅಲ್ಲೇ ಇದ್ದ ದೀಪ್ ಸಿಧು ಮೇಲೆಯೂ ಎಫ್‌ಐಆರ್‌ ದಾಖಲಾಗಿದೆ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 300 ಪೊಲೀಸರು ಗಾಯಗೊಂಡಿದ್ದಾರೆ, ಸಂಘರ್ಷದಲ್ಲಿ ಭಾಗಿಯಾಗಿರುವ ರೈತರನ್ನು ಗುರುತಿಸಲು ಅನೇಕ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಘಟನೆಯ ಬಗ್ಗೆ ವಿಚಾರಣೆ ನಡೆಸಲು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಕೆಯಾಗಿದೆ. ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ಮಾಡುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.

ಕೇಂದ್ರದ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಎರಡು ತಿಂಗಳಿನಿಂದ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರು. ಕೇಂದ್ರ ಸರ್ಕಾರ ರೈತರೊಂದಿಗೆ ಇರುವರೆಗೂ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಇವೆಲ್ಲವೂ ಮುರಿದು ಬಿದ್ದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...