Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...