Homeಮುಖಪುಟಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸುವುದಾಗಿ ಮತ್ತೇ ಘೋಷಿಸಿದ್ದಾರೆ. ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಅವರು ರೈತರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್

ಗುರುವಾರದಿಂದ ಗಾಜಿಪುರ ಮತ್ತು ಟಿಕ್ರಿಯಲ್ಲಿ ಗೊಂದಲಗಳು ಸೃಷಿಯಾಗಿದೆ. ಗಾಜಿಪುರದಲ್ಲಿ ಉತ್ತರ ಪ್ರದೇಶದ ಪೊಲೀಸರು ಪ್ರತಿಭಟನೆಯನ್ನು ಖಾಲಿ ಮಾಡಿ ಎಂದು ಪ್ರತಿಭಟನಾ ನಿರತ ರೈತರನ್ನು ಬೆದರಿಸಿತ್ತು. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೀರು ಮತ್ತು ವಿದ್ಯುತ್ತನ್ನು ಕಡಿತ ಮಾಡಿತ್ತು. ಟಿಕ್ರಿ ಗಡಿಯಲ್ಲಿ ಸಂಘಪರಿವಾರದ ಜನರು ಕಲ್ಲು ತೂರಾಟ ಸೇರಿದಂತೆ ಪ್ರತಿಭಟನಾ ನಿರತ ರೈತರ ವಸ್ತುಗಳಿಗೆ ಹಾನಿ ಮಾಡಿದ್ದರು.

ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ, ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.

“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. The congress spoiled the entire farming community by treating them as vote bank.The lian waiver of 2008 concieved by corrupt cynical Chidambaram paved way for loss of repayment ethics by farmers.Even in thus agitation it is clear as crystal that Rahul aka Pappu is thinking of exploiting the situation tomake a comeback.

  2. ಗೋಲಿಬಾರ್ ನಡೆದು ಒಂದೇ ಒಂದು ರೈತನ ಹೆಣ ಬಿಳೋದನ್ನ ರಣಹದ್ದುಗಳಂತೆ ಕಾಯ್ದು ಕುಳಿತಿದ್ದರು. ಇವರ ನಿರೀಕ್ಷೆ ಹುಸಿಯಾಯಿತು. ಅದಕ್ಕೆ ಪ್ರತಿಭಟನೆಗೆ ಮತ್ತೆ ಎಕ್ಸಲೇಟರ್ ಕೊಡ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...